Advertisement

ಕನಕದಾಸರ ತತ್ವ ಸರ್ವಕಾಲಕ್ಕೂ ಆದರ್ಶಪ್ರಾಯ

06:55 AM Feb 01, 2019 | |

ಕಲಬುರಗಿ: ಸಂತ, ಶ್ರೇಷ್ಠ ಕವಿ ಕನಕದಾಸರ ಕೀರ್ತನೆಗಳು ಮತ್ತು ತತ್ವಗಳು ಸರ್ವಕಾಲಕ್ಕೂ ಆದರ್ಶಪ್ರಾಯವಾಗಿದ್ದು, ಜಾತಿ ಬೇಧವಿಲ್ಲದೆ ಸರ್ವ ಜನಾಂಗವು ಅವರ ಕೀರ್ತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್‌ ಹೇಳಿದರು.

Advertisement

ನಗರದ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸðತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಜನಿಸಿದ ಕನಕದಾಸರು ತಮ್ಮ ಕೀರ್ತನೆಗಳಿಂದ ಪ್ರಸಿದ್ಧಿ ಪಡೆದ ಸಂತರಾಗಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ರಾಚಪ್ಪ ಮಾತನಾಡಿ, ಕುರುಬ ಸಮುದಾಯ ಮುಂದೆ ಬರಬೇಕಾದರೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿ ಹೊಂದಲು ಸಾಧ್ಯ ಎಂದರಲ್ಲದೇ ಇತ್ತೀಚೆಗೆ ಜಾತಿ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾಣೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಭಂಕೂರಿನ ಕರ್ನಾಟಕ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಪಿ.ಎಸ್‌.ಕೋಕಟನೂರ ವಿಶೇಷ ಉಪನ್ಯಾಸ ನೀಡಿದರು.

ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಸಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಪಂ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ ಉದ್ಘಾಟಿಸಿದರು.

Advertisement

ಪಾಲಿಕೆ ಮಹಾಪೌರರಾದ ಮಲ್ಲಮ್ಮ ಎಸ್‌.ವಳಕೇರಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಜಿಲ್ಲಾ ಪಂಚಾಯತ ಸದಸ್ಯ ದಿಲೀಪ ಪಾಟೀಲ, ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ ಬಳಬಟ್ಟಿ, ಕುರುಬರ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಗದೇವಪ್ಪ ಮುಗಟಾ, ಪ್ರಧಾನ ಕಾರ್ಯದರ್ಶಿ ಡಾ| ಬಾಬುರಾವ ಪೂಜಾರಿ, ಕುರುಬರ ಸಂಘದ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ, ನಾಗೇಂದ್ರಪ್ಪ ಪೂಜಾರಿ, ಹಣಮಂತ ಪೂಜಾರಿ ಹಾಗೂ ಸಮಾಜದ ಗಣ್ಯರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮೇಳಕುಂದ ಮಠದ ಸ್ವಾಮೀಜಿ ಮಹಾದೇವಪ್ಪ ಮುತ್ಯಾ ಸಾನ್ನಿಧ್ಯ, ವಹಿಸಿದ್ದರು. ಕನ್ನಡ ಮತ್ತು ಸಂಸðತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸ್ವಾಗತಿಸಿದರೆ ಶಿವಾನಂದ ಅಣಜಗಿ ನಿರೂಪಿಸಿದರು, ಮಹೇಶ ಧರಿ ವಂದಿಸಿದರು.

ಸಂತ ಶ್ರೇಷ್ಠ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಕಲಬುರಗಿಯ ನೆಹರು ಗಂಜಿನ ನಗರೇಶ್ವರ ಬಾಲ ವಿಕಾಸ ಶಾಲೆಯಿಂದ ಆರಂಭಗೊಂಡು ಚೌಕ ಪೊಲೀಸ್‌ ಠಾಣೆ, ಸೂಪರ್‌ ಮಾರ್ಕೆಟ್, ಜಗತ್‌ ವೃತ್ತದ ಮೂಲಕ ಡಾ| ಎಸ್‌.ಎಂ.ಪಂಡಿತ ರಂಗಮಂದಿರದ ವರೆಗೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next