Advertisement

ಖಾಸಗಿ ಆಸ್ಪತ್ರೆ ಏಕ ದರ ನಿಗದಿಗೆ ಕರಡು ಇಂದು ಸಲ್ಲಿಕೆ

07:50 AM Sep 15, 2017 | |

ಹುಬ್ಬಳ್ಳಿ: ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಒಂದೇ ದರ ನಿಗದಿ ಪಡಿಸುವಲ್ಲಿ 2007ರ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಶುಕ್ರವಾರ ಮಸೂದೆ ಕರಡು ಪ್ರತಿ ವಿಧಾನಸಭೆ ಸಭಾಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್‌.ರಮೇಶ ಕುಮಾರ್‌ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಅಂತಿಮ ಸಭೆ ನಡೆಸಿದ ನಂತರ ಮಧ್ಯಾಹ್ನ 3 ಗಂಟೆಗೆ ಸಭಾಧ್ಯಕ್ಷರಿಗೆ ಪ್ರತಿ ಸಲ್ಲಿಸುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಒಂದೊಂದು ಚಿಕಿತ್ಸೆಗೆ ಒಂದೊಂದು ಶುಲ್ಕವಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಸೂದೆಗೆ ತಿದ್ದುಪಡಿ ಮಾಡಲಾಗಿದೆ. ಒಂದು ದಿನದ ವಿಶೇಷ ಅಧಿವೇಶನ ಅಥವಾ ನವೆಂಬರ್‌ನಲ್ಲಿ ನಡೆಯವ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next