ಕೊಲ್ಲೂರು/ಸಿದ್ದಾಪುರ/ ಬೆಳ್ತಂಗಡಿ: ಮಾಜಿ ಪ್ರಧಾನಿ, ಜೆಡಿಎಸ್ ಮುಖಂಡ ಎಚ್.ಡಿ. ದೇವೇಗೌಡ ಅವರು ಸಪತ್ನಿàಕರಾಗಿ ಸೋಮವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ,ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕೊಲ್ಲೂರಿನಲ್ಲಿ ಶ್ರೀ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವೇಗೌಡ ಅವರು, ಪಕ್ಷ ಸಂಘಟನೆ ಹಾಗೂ ಪಕ್ಷದ ನೂತನ ಕಚೇರಿ ಆರಂಭಿಸುವ ಹಿನ್ನೆಲೆಯಲ್ಲಿ ಅಮ್ಮನವರ ಆಶೀರ್ವಾದ ಅತೀ ಅಗತ್ಯ. ಇಷ್ಟಾರ್ಥ ಸಿದ್ಧಿಗಾಗಿ ತಾಯಿಯ ಆಶೀರ್ವಾದ ಪಡೆಯಲು ಆಗಮಿಸಿದ್ದೇನೆ ಎಂದು ಹೇಳಿದರು.
ಹಾಸನ – ಬೆಂಗಳೂರು ರೈಲು ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ದಿಲ್ಲಿಗೆ ತೆರಳಲಿದ್ದೇನೆ. ರಾಜ್ಯದಲ್ಲಿ ಜೆಡಿಎಸ್‌ಗೆ ಪೂರಕ ವಾತಾವರಣ ಇದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮಹತ್ವದ ಪಾತ್ರ ವಹಿಸುವುದು ಎಂದರು.
ಕೊಲ್ಲೂರು ದೇಗುಲದಲ್ಲಿ ಆಡಳಿತಾಧಿಕಾರಿ ಹಾಗೂ ಉಪಕಮಿಷನರ್ ಆಗಿರುವ ಯೋಗೀಶ್ವರ್, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅರ್ಚಕ ಗೋವಿಂದ ಅಡಿಗ ಅವರು ಮಾಜಿ ಪ್ರದಾನಿಯವರನ್ನು ಸ್ವಾಗತಿಸಿ ಗೌರವಿಸಿದರು. ಕಮಲಶಿಲೆಯಲ್ಲಿ ಕ್ಷೇತ್ರದ ಆನುವಂಶಿಕ ಆಡಳಿತ ಮೂಕ್ತೇಸರ ಎಸ್. ಸಚ್ಚಿದಾನಂದ ಚಾತ್ರ, ಸಹ ಮೊಕ್ತೇಸರರಾದ ಬರೆಗುಂಡಿ ಶ್ರೀನಿವಾಸ ಚಾತ್ರ ಹಾಗೂ ಎ. ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು ಅವರು ದೇವೇಗೌಡ ದಂಪತಿಯನ್ನು ಬರಮಾಡಕೊಂಡರು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.
ಜೆಡಿಎಸ್ ಮುಖಂಡರಾದ ಯೋಗೀಶ್ ಶೆಟ್ಟಿ, ಕೆ. ವಾಸುದೇವ ರಾವ್, ಸುಧಾಕರ ಶೆಟ್ಟಿ ಹೆಜಮಾಡಿ, ಶೇಖರ ಕೋಟ್ಯಾನ್, ಕೆ.ಎನ್. ಶ್ರೀಕಾಂತ ಅಡಿಗ, ರಂಜಿತ್ ಕುಮಾರ್ ಶೆಟ್ಟಿ, ಬಿ.ಟಿ. ಮಂಜುನಾಥ್, ಕಮಲಶಿಲೆ ದೇಗುಲದ ವ್ಯವಸ್ಥಾಪಕ ಗುರು ಭಟ್ ಮೊದಲಾದವರು ಉಪಸ್ಥಿತರಿದ್ದರು.