Advertisement
ನಗರದ ತಮ್ಮ ನಿವಾಸದ ಬಳಿ ಭಾನುವಾರ ಏರ್ಪಡಿಸಿದ್ದ ಕ್ಷೇತ್ರದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮತದಾರರು ನನ್ನ ಮೇಲೆ ಅಪಾರ ನಿರೀಕ್ಷೆ ಹೊಂದಿದ್ದಾರೆ. ಅವರ ನಿರೀಕ್ಷೆಗಳನ್ನು ಪೂರೈಸುವ ಸಲುವಾಗಿ ಈ ರೀತಿಯ ಕಾರ್ಯಕ್ರಮವೊಂದನ್ನು ರೂಪಿಸುವ ಪ್ರಯತ್ನ ಮಾಡುತ್ತಿದ್ದು, ಪ್ರತಿದಿನ ಎರಡು ಗ್ರಾಪಂಗಳಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
Related Articles
Advertisement
ರಾಜ್ಯ ಬಿಎಸ್ಪಿ ಉಸ್ತುವಾರಿಯನ್ನು ಪಕ್ಷದ ವರಿಷ್ಠರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ಕೃತಜ್ಞತೆ ಅರ್ಪಿಸಬೇಕಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ. ಶಿವಕುಮಾರ್ ಮಾತನಾಡಿ, ನಿರಂತರ ಚಳುವಳಿಯಲ್ಲಿ ಬಾಗಿಯಾಗಿ ಹೋರಾಟ ಮಾಡಿ ಪಕ್ಷವನ್ನು ಮತ್ತಷ್ಟು ಬಲವರ್ಧನಗೆ ಪ್ರಯತ್ನಿಸುವುದಾಗಿ ಹೇಳಿದ ಅವರು ಬಿಎಸ್ಪಿ ಅಭ್ಯರ್ಥಿ ಉತ್ತಮ ಅಭ್ಯರ್ಥಿ ಎಂದು ಪರಿಗಣಿಸಿ ಕ್ಷೇತ್ರ ವ್ಯಾಪಿ ಉತ್ತಮ ಪ್ರತಿಕ್ರಿಯೆ ತೋರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಕಡಿಮೆ ಅವಧಿಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಸ್ಪಂದನೆ ಲಭಿಸಿದೆ ಮತ್ತು ಕ್ಷೇತ್ರ ವ್ಯಾಪಿ ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿ ಉತ್ತಮ ಮತ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೂ ಇದೇ ರೀತಿಯ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕರ್ತರ ಮತ್ತು ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ರಾಜ್ಯ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಮಾದೇಶ್ ಉಪ್ಪಾರ, ಜಿಲ್ಲಾ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ವಲಯ ಅಧ್ಯಕ್ಷ ಕರಾಟೆ ಸಿದ್ಧರಾಜು, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್,
ತಾಲೂಕು ಅಧ್ಯಕ್ಷ ಶಿವನಂಜಪ್ಪ, ಕ್ಷೇತ್ರ ಅಧ್ಯಕ್ಷ ಸಿದ್ಧರಾಜು, ನಗರಸಭಾ ಸದಸ್ಯರಾದ ನಾಸೀರ್ ಷರೀಪ್, ಜಯರಾಜು, ಪ್ರಕಾಶ್, ಜಯಮೇರಿ, ಟೌನ್ ಅದ್ಯಕ್ಷ ಜಕಾವುಲ್ಲಾ, ಮುಖಂಡರಾದ ಮಹದೇವಸ್ವಾಮಿ ನಾಯಕ, ನಟರಾಜು, ಸೆಲ್ವರಾಜ್, ಜಗದೀಶ್, ರಾಜಶೇಖರಮೂರ್ತಿ, ಹಣ್ಣು ಮತ್ತು ತರಕಾರಿ ಮಾಲೀಕರ ಸಂಘದ ಅಧ್ಯಕ್ಷ ಸಮೀವುಲ್ಲಾ ಇತರರಿದ್ದರು.