Advertisement

ಸಮಸ್ಯೆ ಉಲ್ಬಣಗೊಳಿಸುವುದು ಕೆಲವರ ಉದ್ದೇಶ: ಬಿಎಸ್‌ವೈ

03:45 AM Jan 21, 2017 | Team Udayavani |

ಕಲಬುರಗಿ: ರಾಜ್ಯ ಬಿಜೆಪಿಯಲ್ಲಿ ಗೊಂದಲವಿರುವುದು ನಿಜ. ಕೆಲವರಿಗೆ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ಉಲ್ಬಣಗೊಳಿಸುವುದೇ ಉದ್ದೇಶವಾಗಿದೆ. ಆದರೂ ಇನ್ನೊಮ್ಮೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈಶ್ವರಪ್ಪ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಪಕ್ಷದಲ್ಲಿ ಸಮಸ್ಯೆಗಳಿವೆ ಎಂದಾಗ ಅಹವಾಲು ಕೇಳಲು ಸಭೆ ಕರೆದಿದ್ದೆ. ಆದರೆ ಅವರದೇ ಕಾರಣಗಳಿಂದ ಬಂದಿಲ್ಲ. ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಪಕ್ಷದ ಹೈಕಮಾಂಡ್‌ ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

ಜ.21 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಬ್ರಿಗೇಡ್‌ ಹಾಗೂ ಈಶ್ವರಪ್ಪ ಅವರ ಬಗ್ಗೆ ಚರ್ಚಿಸುವುದಿಲ್ಲ. 2018ರ ಚುನಾವಣೆ ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡುವಲ್ಲಿ ಪಕ್ಷದ ಹೆಜ್ಜೆಗಳ ಕುರಿತು ಚರ್ಚಿಸಲಾಗುವುದು ಎಂದರು. 

ನಂಜನಗೂಡು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಗೆಲುವು ಖಚಿತ. ಪ್ರಸಾದ್‌ ಅವರ ಸೇರ್ಪಡೆಯಿಂದ ಮೈಸೂರು ಮಾತ್ರವಲ್ಲದೇ ರಾಜ್ಯದಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ಬಂದಿದೆ ಎಂದರು. ಮಾಜಿ ಸಚಿವ ಸೋಮಣ್ಣ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರಲ್ಲ ಎನ್ನುವ ಪ್ರಶ್ನೆಗೆ ಬಿಎಸ್‌ವೈ ಉತ್ತರ ನೀಡಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next