Advertisement

ಪಾಕಿಸ್ತಾನ ಸಮಸ್ಯೆ ಜಾಗತಿಕ ಸವಾಲಾಗಿದೆ ರಾಮ್‌ ಮಾಧವ್‌

07:28 AM Oct 23, 2019 | Team Udayavani |

ಹೊಸದಿಲ್ಲಿ: ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಹೇಳಿಕೆ ನೀಡಿದ್ದಾರೆ.

Advertisement

ಪಾಕಿಸ್ತಾನ ಕೇವಲ ಭಾರತದ ಸಮಸ್ಯೆ ಅಲ್ಲ , ಜಾಗತಿಕ ಮಟ್ಟದ ಸವಾಲಾಗಿ ಮಾರ್ಪಟ್ಟಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಪಾಕಿಸ್ತಾನದಲ್ಲಿನ ಭಯೋತ್ಪಾದನೆ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಲು ಎಲ್ಲಾ ಪ್ರಜಾಪ್ರಭುತ್ವ ದೇಶಗಳು ಒಟ್ಟಾಗಿ ಶ್ರಮಿಸಬೇಕಿದೆ ಎಂದು ಹೇಳಿದ್ದಾರೆ.

ಕಳೆದ ಏಳು ದಶಕಗಳಿಂದ ಭಾರತ ಮತ್ತು ಪಾಕಿಸ್ತಾನದ ಸಂಬಂಧದಲ್ಲಿ ತನ್ನದೇ ಆದ ಏರಿಳಿತಗಳನ್ನು ಹೊಂದಿದ್ದು, ಪಾಕಿಸ್ತಾನದ ಜತೆ ಸ್ನೇಹ ಸೌಹರ್ದವನ್ನು ಬೆಳೆಸಲು ನಾವು ಸಿದ್ಧವಿದ್ದೇವೆ. ಆದರೆ ಅದಕ್ಕೂ ಮೊದಲು ಪ್ರಮುಖ ಸಮಸ್ಯೆಯಾದ ಗಡಿಯಾಚೆಗಿನ ಭಯೋತ್ಪಾದನೆ ಬಗೆಹರಿಯಬೇಕು ಎಂದರು.

ದಿಲ್ಲಿಯಲ್ಲಿ ಯುಎಸ್‌-ಇಂಡಿಯಾ ಸ್ಟ್ರಾಟೆಜಿಕ್‌ ಪಾರ್ಟ್ನರ್ ಶಿಪ್ ಫೋರಂ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಹಿಂದೆ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಭಾರತಕ್ಕೆ ನೆರಹೊರದೇಶಗಳು ಸಲಹೆ ನೀಡುತ್ತಿದ್ದವು. ಆದರೆ ಇಂದು ಯಾರೂ ಆ ಕೆಲಸವನ್ನು ಮಾಡುತ್ತಿಲ್ಲ, ಏಕೆಂದರೆ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆಯ ಕೇಂದ್ರ ಬಿಂದುವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next