Advertisement
ತಾಲೂಕಿನ ಹಿರೀಸಾವೆ ಹೋಬಳಿ ಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಲವು ಶಾಸಕರಿಗೆ ಪಕ್ಷ ನಿಷ್ಠೆ ಕಡಿಮೆಯಾಗುತ್ತಿದೆ. ಅಧಿಕಾರದ ಹಿಂದೆ ಓಡುವುದನ್ನು ರೂಢಿಸಿಕೊಂಡಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿ ಅವರ ಅಭಿವೃದ್ಧಿ ಮಾತ್ರ ಆಗುತ್ತಿದೆ ಇಂತಹವರಿಗೆ ಜನರು ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.
Related Articles
Advertisement
ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಜಿ.ರಾಮಕೃಷ್ಣ, ತುಮಕೂರು ಜಿಲ್ಲಾ ವೀಕ್ಷಕ ಎಚ್.ಎನ್.ಲೋಕೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ದೇವರಾಜೇಗೌಡ, ದಿಡಗ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಕುಮಾರ್, ಪ್ರಮುಖರಾದ ಯೋಗೇಶ್ ಹಾಗೂ ಇತರರು ಹಾಜರಿದ್ದರು.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕೇವಲ ಕೋಲಾಹಲವನ್ನು ಸೃಷ್ಟಿಸುವ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಪಾದಿಸಿದರು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಒಂದು ಪಕ್ಷ ಅಧಿಕಾರಲ್ಲಿ ಇದ್ದರೆ ಶರವೇಗದಲ್ಲಿ ರಾಜ್ಯ ಅಭಿವೃದ್ಧಿ ಹೊಂದುತ್ತದೆ ಎಂದು ರಾಜ್ಯದ ಜನರಿಗೆ ಭರವಸೆ ನೀಡಿದಲ್ಲದೇ ಹಲವು ಶಾಸಕರನ್ನು ತಮ್ಮೆಡೆಗೆ ಸೆಳೆಸು ಅಧಿಕಾರದ ಗದ್ದುಗೆ ಏರಿದರು. ಆದರೆ ಇಂದು ರಾಜ್ಯದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ: ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಸತತ 15 ವರ್ಷಗಳಿಂದ ಬರದ ಬೇಗೆ ಎದುರಿಸುತ್ತಿದ್ದ ಚನ್ನರಾಯಪಟ್ಟಣ ತಾಲೂಕನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರ ಸ್ವಾಮಿ ಅವರು ಏತನೀರಾವರಿ ಯೋಜನೆಯಡಿ ತಾಲೂಕಿನ 80 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿದ್ದಾರೆ. ಇದರಿಂದ ವ್ಯಾಪ್ತಿಯ ಅಂತರ್ಜಲ ಹೆಚ್ಚುವುದರ ಜತೆಗೆ ಸುಮಾರು 120 ಗ್ರಾಮಗಳಿಗೆ ಅನುಕೂಲವಾಗಿದೆ. ಸದ್ಯ ದಿಡಗ-ಕಬ್ಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಂಡಿದ್ದು ವಿಸ್ತೃತ ಯೋಜನಾ ವರದಿ (ಡಿಪಿಆರ್) ಮುಗಿದು ಪ್ರಸ್ತಾವನೆಯ ಹಂತದಲ್ಲಿದೆ ಎಂದರು.