Advertisement
ರವಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಿಂದೂ ಐಕ್ಯವೇದಿ ಸಂಘಟನೆಯ ಅಧ್ಯಕ್ಷೆ ಕೆ.ಪಿ.ಶಶಿಕಲಾ ಅವರು, “ಕರ್ನಾಟಕದಲ್ಲಿ ಗೌರಿ ಲಂಕೇಶ್‌ಗೆ ಆದಂತೆ ನಿಮಗೂ ಆಗಬಾರದು ಎಂದಾದರೆ, ಜಾತ್ಯತೀತ ಲೇಖಕರೆಲ್ಲ ಆದಷ್ಟು ಬೇಗ ಶಿವ ದೇವಾಲಯಗಳಲ್ಲಿ ಮೃತ್ಯುಂಜಯ ಹೋಮ ಮಾಡಿಸಿಕೊಳ್ಳಿ,’ ಎಂದಿದ್ದರು. ಈ ಹಿನ್ನೆಲೆಯಲ್ಲಿ ಶಶಿಕಲಾ ವಿರುದ್ಧ ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಶಿಕಲಾ ಹಾಗೂ ಅದೇ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಹಿಂದೂ ಐಕ್ಯವೇದಿ ಸಂಘಟನೆಯ ಮತ್ತೂಬ್ಬ ನಾಯಕ ಆರ್.ವಿ.ಬಾಬು ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕಲಾ ಹೇಳಿಕೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಅನೇಕರಿಂದ ಖಂಡನೆ ವ್ಯಕ್ತವಾಗಿತ್ತು.