Advertisement
ಸೆ. 11ರಂದು ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ, ಉಳಿದ ಎಲ್ಲ ಕಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಥರ್ಮಲ್ ಸ್ಕ್ರೀನಿಂಗ್ ಸಹಿತ ಕೇಂದ್ರ ಹಾಗೂ ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕಳೆದ 5 ತಿಂಗಳಿಗೂ ಹೆಚ್ಚು ಕಾಲದಿಂದ ಓದುಗರಿಗೆ ಬಂದ್ ಆಗಿದ್ದ ಗ್ರಂಥಾಲಯಗಳು ಈಗ ಮತ್ತೆ ತೆರೆದುಕೊಂಡಿವೆ.
ರಾಜ್ಯದಲ್ಲಿ ದೇಗುಲ, ರೆಸ್ಟೋರೆಂಟ್ ತೆರೆದರೂ ಸಾರ್ವಜನಿಕ ಗ್ರಂಥಾಲಯ ತೆರೆಯದಿರುವ ಬಗ್ಗೆ “ಉದಯವಾಣಿ’ಯು ಸೆ. 2ರಂದು ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಆಗ ಪ್ರತಿಕ್ರಿಯಿಸಿದ್ದ ಸಾರ್ವಜನಿಕ ಇಲಾಖೆಯ ರಾಜ್ಯ ನಿರ್ದೇಶಕ ಡಾ| ಸತೀಶ್ ಎಸ್. ಹೊಸಮನೆ ಅವರು ಈ ಬಗ್ಗೆ ತ್ವರಿತವಾಗಿ ಸಂಬಂಧಪಟ್ಟವರಲ್ಲಿ ಮಾತುಕತೆ ನಡೆಸಿ, ಗ್ರಂಥಾಲಯ ಸಾರ್ವಜನಿಕರಿಗೆ ತೆರೆಯಲಾಗುವುದು ಎಂದು ಭರವಸೆ ನೀಡಿದ್ದರು.