Advertisement

ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಪ್ರಚಾರ ಅಗತ್ಯ

02:17 AM Oct 10, 2020 | mahesh |

ಉಡುಪಿ: ಕೋವಿಡ್‌ ನಿಯಂತ್ರಣಕ್ಕೆ ತೆಗೆದುಕೊಳ್ಳಬಹು ದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಮೂಲಕ ವ್ಯಾಪಕ ಪ್ರಚಾರ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅಧಿಕಾರಿಗಳಿಗೆ ತಿಳಿಸಿದರು.

Advertisement

ಅವರು ಶುಕ್ರವಾರ ವಾರ್ತಾ ಇಲಾಖೆಯ ಆಯುಕ್ತರು, ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೋವಿಡ್‌-19 ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿದಿನ 10,000ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಇದನ್ನು ತಡೆಯಲು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅತೀ ಅವಶ್ಯ ಮಾರ್ಗವಾಗಿದೆ. ಮುನ್ನೆಚ್ಚರಿಕೆ ಕ್ರಮಗಳಾದ ಮುಖಗವಸು ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಆಗಾಗ ಕೈತೊಳೆಯು ವುದು ಸೇರಿದಂತೆ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಅರಿವು ಮೂಡಿಸುವ ಕಾರ್ಯ ಕ್ರಮವು ಸಮಾಜದ ತಳಮಟ್ಟದಲ್ಲಿ ಸಹ ಆಗಬೇಕಿದೆ. ಇದಕ್ಕಾಗಿ ಮಾಧ್ಯಮಗಳು ಸೇರಿದಂತೆ ಎಲ್ಲ ರೀತಿಯ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಪ್ರಚಾರಗಳನ್ನು ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ನಡೆಸಬೇಕು ಎಂದರು.

ವಾರ್ತಾ ಇಲಾಖೆಯ ಆಯುಕ್ತ ಡಾ| ಪಿ. ಹರ್ಷ ಅವರು ಮಾತನಾಡಿ, ಕೋವಿಡ್‌ ಸೋಂಕು ತಡೆಯಲು ಕೋವಿಡ್‌ನ‌ ಸರಳ ಮಾರ್ಗಸೂಚಿಗಳ ಬಗ್ಗೆ ಸ್ಥಳೀಯ ಕೇಬಲ್‌ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡುವುದರಿಂದ ಹೆಚ್ಚು ಪರಿಣಾಮಕಾರಿಯಾಗಿ ಪ್ರಚಾರ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿಗಳು ಹಾಗೂ ರಾಜ್ಯ ಮಟ್ಟದ ಉನ್ನತ ಅಧಿಕಾರಿಗಳು ಕೋವಿಡ್‌ ನಿಯಂತ್ರಣದ ಬಗ್ಗೆ ವೀಡಿಯೋ ಸಂದೇಶಗಳನ್ನು ಹೆಚ್ಚು ಪ್ರಚಾರ ಮಾಡುವುದರಿಂದ ಹಾಗೂ ಹೆದ್ದಾರಿ ಫ‌ಲಕಗಳಲ್ಲಿ ರೋಗ ನಿಯಂತ್ರಣದ ಬಗ್ಗೆ ಪ್ರಚಾರ ವ್ಯಾಪಕವಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಕೋವಿಡ್‌ ಬಗ್ಗೆ ಸುಳ್ಳು ಸುದ್ದಿಗಳು ಹರಡುತ್ತಿವೆ. ಅವುಗಳ ಬಗ್ಗೆ ಸ್ಪಷ್ಟೀಕರಣ ನೀಡುವುದರ ಜತೆಗೆ ವೈದ್ಯರೊಂದಿಗೆ ಅಧುನಿಕ ತಂತ್ರಜ್ಞಾನಗಳ ಬಳಕೆ ಯಿಂದ ಬೆರಳ ತುದಿಯಲ್ಲಿಯೇ ಮೊಬೈಲ್‌ ಮೂಲಕ ಉಚಿತ ಆರೋಗ್ಯ ನೆರವು ಪಡೆಯುವುದು ಸೇರಿದಂತೆ ಕೋವಿಡ್‌ನಿಂದ ಚಿಕಿತ್ಸೆ ಪಡೆದು ಗುಣಮುಖರಾದ ರೋಗಿಗಳ ಯಶೋಗಾಥೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಕೆಲಸ ಆಗಬೇಕಿದೆ ಎಂದರು.

Advertisement

ವೀಡಿಯೋ ಕಾನ್ಫರೆನ್ಸ್‌ನಲ್ಲಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ, ಆರೋಗ್ಯ ಅಭಿಯಾನ ನಿರ್ದೇಶಕಿ ಅರುಂಧತಿ, ಜಿಲ್ಲಾಧಿಕಾರಿ ಜಿ.ಜಗದೀಶ್‌, ಸಿಇಒ ಡಾ| ನವೀನ್‌ ಭಟ್‌, ಡಿಎಚ್‌ಒ ಡಾ| ಸುಧೀàರ್‌ ಚಂದ್ರ ಸೂಡ, ಕೋವಿಡ್‌ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next