Advertisement
ಸಭೆಯಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿಕೊಡಲು ಅಧಿಕಾರಿಗಳ ವಿಳಂಬ, ಸಾರ್ವಜನಿಕ ಸ್ಥಳಗಳ ಒತ್ತುವರಿ, ಕೆರೆ ಒತ್ತುವರಿ, ಕಂದಾಯ ಇಲಾಖೆಯಲ್ಲಿ ಜಮೀನಿಗೆ ಸಂಬಂಧಪಟ್ಟ ದಾಖಲೆಗಳನ್ನು ಮಾಡಿಕೊಡಲು ನಿಧಾನಗತಿ, ಭ್ರಷ್ಟಾಚಾರ ಹೀಗೆ ಹಲವು ವಿಚಾರಗಳಿಗೆ ಸಂಬಂಧಪಟ್ಟ ದೂರು ದಾಖಲಿಸಿದರು.
Related Articles
Advertisement
ಪ್ರತಿಕ್ರಿಯಿಸಿದ ಲೋಕಾಯುಕ್ತ ಎಸ್‌ಪಿ ಅಂಜಲಿ ಅವರು, ಈ ವಿಷಯವನ್ನು ಲೋಕಾಯುಕ್ತರ ಗಮನಕ್ಕೆ ತಂದು, ತನಿಖೆ ನಡೆಸಿ ಕ್ರಮ ವಹಿಸಲಾಗುವುದು. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸುರೇಶ್‌ಗೆ ಸೂಚಿಸಿದರು.
ಕಲಾವಿದರಿಗೆ ವಂಚನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಕೆಲವೇ ಕಲಾವಿದರಿಗೆ ಸರ್ಕಾರದ ಅನುದಾನ ನೀಡುವ ಮೂಲಕ ವಂಚನೆ ಮಾಡಿದ್ದಾರೆ. ಒಬ್ಬ ಕಲಾವಿದನಿಗೆ 10ರಿಂದ 15 ಕಾರ್ಯಕ್ರಮಗಳಲ್ಲಿ ಅವಕಾಶ ನೀಡಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಇದರಿಂದ ತಾಲೂಕಿನ ನೂರಾರು ಕಲಾವಿದರಿಗೆ ಅನ್ಯಾಯವಾಗಿದೆ. ಸಮುದಾಯ ಭವನ ನಿರ್ಮಿಸಿಕೊಳ್ಳಲು ಸರ್ಕಾರ ನೀಡಿರುವ ಅನುದಾನ ಬಳಸಿಕೊಳ್ಳಲಾಗದಂತೆ ವ್ಯವಸ್ಥಿತವಾಗಿ ಇತರ ಕಲಾವಿದರನ್ನು ಎತ್ತಿಕಟ್ಟಿ ಅನುದಾನ ತಡೆಹಿಡಿದಿದ್ದಾರೆ. ಹೀಗಾಗಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ದೂರು ನೀಡಿದರು.
ಕ್ರಮ ಕೈಗೊಳ್ಳುವ ಭರವಸೆ: ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು, ಈ ಬಗ್ಗೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಭೆಯಲ್ಲಿ ಜಮೀನಿಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಿಕೊಡದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧವೂ ರೈತರು ದೂರು ಸಲ್ಲಿಸಿದರು. ಸಭೆಯಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆದು, ಸಮಸ್ಯೆ ಸರಿಪಡಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆ, ಗ್ರಾಮ ಪಂಚಾಯ್ತಿ ಹಾಗೂ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.