Advertisement
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಹಕಾರ ಸಂಘಗಳ ಸದುಪಯೋಗವನ್ನು 2.50 ಕೋಟಿ ಜನರು ಪಡೆಯುತ್ತಿದ್ದಾರೆ ಎಂದು ಹೇಳಿದರು.
Related Articles
Advertisement
ಎಸ್ಸಿ, ಎಸ್ಟಿ ಸಮುದಾಯದವರಿಗೆ ಸೌಲಭ್ಯ: ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಆರ್.ಟಿ.ದ್ಯಾವೇಗೌಡ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹಲವಾರು ಯೋಜನೆಗಳಿವೆ. ಆದರೆ ಫಲಾನುಭವಿಗಳ ಸಂಖ್ಯೆ ಕಡಿಮೆಯಿದೆ. ಅದಕ್ಕಾಗಿ ಈ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು. ಕಾರ್ಮಿಕರು, ನಿರುದ್ಯೋಗಿಗಳು, ಸಣ್ಣ ಮತ್ತು ಅತಿ ಸಣ್ಣ ರೈತರುಗಳಿಗೆ ಸಿಗುವಂತಹ ಸೌಲಭ್ಯಗಳು ಕಾಲ ಕಾಲಕ್ಕೆ ಜನರಿಗೆ ದೊರಕಬೇಕು. ಆ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ ಕೆಲಸ ನಿರ್ವಹಿಸಬೇಕು ಎಂದರು.
ಸಹಕಾರ ಸಂಘಗಳ ಅಪರ ನಿಬಂಧಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎ.ಸಿ.ದಿವಾಕರ ಅವರು ಸಣ್ಣ ಮತ್ತು ಅತಿಸಣ್ಣ ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಿಗಳಿಗೆ ಸಹಕಾರ ಸಂಘಗಳಿಂದ ಇರುವ ಸೌಲಭ್ಯವನ್ನು ಪಡೆದುಕೊಳ್ಳುವ ಬಗ್ಗೆ ಹಾಗೂ ಬ್ಯಾಂಕುಗಳಿಂದ ಸಾಲವನ್ನು ಪಡೆಯಬೇಕಾದರೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು.
ಉಪನಿಬಂಧಕ ಜಿ.ಆರ್.ವಿಜಯ್‌ಕುಮಾರ್, ಕಾರ್ಯಕ್ರಮದ ಸಂಚಾಲಕ ಯೋಗೇಂದ್ರ ನಾಯಕ್, ಸಲಹೆಗಾರ ಪಿ.ರುದ್ರಪ್ಪ ಸೇರಿದಂತೆ ಹಾಸನ ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸಹಕಾರ ಸಂಘಗಳ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು