Advertisement

ಚಾರ್ಮಾಡಿಘಾಟ್ ನಲ್ಲಿ ಕಳೆದ ಒಂದು ವಾರದ ಹಿಂದೆ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ಪ್ರತ್ಯಕ್ಷ

06:30 PM Nov 10, 2022 | Team Udayavani |

ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ.

Advertisement

ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರೊಬ್ಬರು ಸೆರೆ ಹಿಡಿದಿದ್ದಾರೆ.

ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ.‌ ಇದೀಗ ಹೆಬ್ಬಾವಿನ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next