ಕುಂದಾಪುರ: ಮಕ್ಕಳ ಹೆತ್ತವರಿಗೆ ಕನ್ನಡ ಮಾಧ್ಯಮ ಶಿಕ್ಷಣದ ಕೀಳರಿಮೆ, ಇಂಗ್ಲಿಷ್ ಮಾಧ್ಯಮ ಶಿಕ್ಷಣದ ವ್ಯಾಮೋಹದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಾಲಾತಿ ಕೊರತೆಯಿಂದ ಗ್ರಾಮೀಣ ಭಾಗದ ಸರಕಾರಿ ಶಾಲೆಗಳು ಮುಚ್ಚುವ ಹಂತವನ್ನು ತಲುಪುತ್ತಿವೆ. ಸರಕಾರಿ ಶಾಲೆಗಳಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಇಂಗ್ಲಿಷ್ ಮಾಧ್ಯಮ ಕಲಿಕೆಗೆ ಅವಕಾಶವಿದೆ ಎಂದು ನಿವೃತ್ತ ಪ್ರಾಂಶುಪಾಲ ಜಯರಾಮ ಶೆಟ್ಟಿ ತೊನ್ನಾಸೆ ಹೇಳಿದರು.
ಅವರು ಕೊಂಚಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು ಹಮ್ಮಿಕೊಳ್ಳಲಾದ ಪೋಷಕರ ಮತ್ತು ವಿದ್ಯಾಭಿಮಾನಿಗಳ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಳ್ವೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಂದ್ರ ನಾಯ್ಕ ಯಳಂದೂರು, ಸದಸ್ಯೆ ನಾಗರತ್ನಾ ಬಿ. ಶೆಟ್ಟಿ, ಉದ್ಯಮಿ ದಯಾನಂದ ಶೆಟ್ಟಿ ಕೆರ್ಜಾಡಿ ದೊಡ್ಮನೆ, ಭಾಸ್ಕರ ಶೆಟ್ಟಿ ತೊನ್ನಾಸೆ, ಎಸ್‌ಡಿಎಂಸಿ ಅಧ್ಯಕ್ಷೆ ಯಶೋದಾ, ಮಾಜಿ ಉಪಾಧ್ಯಕ್ಷ ಲಚ್ಚು ಶೆಟ್ಟಿ, ಕೆ. ಸಂಜೀವ ಆರ್ಡಿ, ನಾಗರಾಜ ಅಡಿಗ ಅಲಾºಡಿ, ಅಂಗನವಾಡಿ ಕಾರ್ಯಕರ್ತೆ ರತ್ನಾ, ಸಹಾಯಕಿ ಯಶೋದಾ, ಹಳೆ ವಿದ್ಯಾರ್ಥಿಗಳು, ಮಕ್ಕಳ ಹೆತ್ತವರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಸುರೇಶ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ ಅರಸಮ್ಮಕಾನು ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸರಿತಾ ಶೆಟ್ಟಿ ವಂದಿಸಿದರು.