Advertisement

ಕೆಪಿಸಿಸಿ ಅಧ್ಯಕ್ಷರ ಶೀಘ್ರ ನೇಮಕ ಒಳ್ಳೆಯದು

11:30 PM Jan 29, 2020 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಆಡಳಿತ ಯಂತ್ರ ಕುಸಿದಿದ್ದು, ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ನಮ್ಮ ಸರ್ಕಾರ ಇದ್ದಾಗ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನ ತಡೆಹಿಡಿಯಲಾಗಿದೆ. ಫೆ.17ರಿಂದ ಅಧಿವೇಶನ ನಡೆಯಲಿದೆ. ಇದೆಲ್ಲದರ ವಿರುದ್ಧವೂ ಅಧಿವೇಶನದಲ್ಲಿ ಧ್ವನಿ ಎತ್ತಬೇಕಾಗಿದೆ. ನಮಗೆ ವಿಪಕ್ಷವಾಗಿ ಸರ್ಕಾರವನ್ನು ಎಚ್ಚರಿಸಲು ಅವಕಾಶವಿದೆ.

Advertisement

ಹೀಗಾಗಿ, ಕೆಪಿಸಿಸಿ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಿಸಿದರೆ ಒಳ್ಳೆಯದು ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾಗಿದೆ. ದೆಹಲಿ ಚುನಾವಣೆಯಲ್ಲಿ ಹೈಕಮಾಂಡ್‌ ನಾಯಕರು ಬ್ಯುಸಿ ಇರುವುದರಿಂದ ತಡವಾಗಿರಬಹುದು. ಮತ್ತೂಮ್ಮೆ ಹೈಕಮಾಂಡ್‌ ಗಮನಕ್ಕೆ ತರಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next