Advertisement

ಬಂಡೀಪುರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ

03:45 AM Mar 06, 2017 | Team Udayavani |

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಭಾನುವಾರ ಮಧ್ಯಾಹ್ನದ ವೇಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಕಳೆದೆರಡು ತಿಂಗಳಿಂದ ಬಸವಳಿದಿದ್ದ ಕಾಡು ಪ್ರಾಣಿಗಳಲ್ಲಿ ನವೋಲ್ಲಾಸ ಮೂಡಿಸಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಕೆಕ್ಕನಹಳ್ಳ, ಮರಳಹಳ್ಳ, ಕುಂದಕೆರೆ ಹೆಡಿಯಾಲ, ಬೇಲದಕುಪ್ಪೆ ಸೇರಿದಂತೆ ಹಿಮವದ್‌ ಗೋಪಾಲಸ್ವಾಮಿ ಬೆಟ್ಟ ಅರಣ್ಯ ಪ್ರದೇಶಗಳಲ್ಲಿ ಅರ್ಧ ಗಂಟೆಗೂ ಹೆಚ್ಚಿನ ಕಾಲ, ಬಂಡೀಪುರ ಅರಣ್ಯ ವ್ಯಾಪ್ತಿಯ ಕುಳ್ಳನಬೆಟ್ಟದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.

Advertisement

ಇನ್ನೆರಡು ದಿನ ಮಳೆ ಸಂಭವ:
ಈ ಮಧ್ಯೆ, ರಾಜ್ಯದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮುಂದಿನ ಮೂರುದಿನಗಳ ಕಾಲ ಸಿಡಿಲು ಸಹಿತ ಸಾಧಾರಣ ಮಳೆ ಸುರಿಯುವ ಸಂಭವ ಇದೆ. ಅಲ್ಲದೆ, ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next