Advertisement

ಮಳೆ; ಮುಂಗಾರು ಬೆಳೆಗೆ ಜೀವ ಕಳೆ

01:00 PM Jul 19, 2022 | Team Udayavani |

ಚಿಂಚೋಳಿ: ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆ ಆಗದೇ ಇರುವುದರಿಂದ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿದ್ದು, ಮುಂಗಾರು ಬೆಳೆಗಳಿಗೆ ಜೀವ ಕಳೆ ಬಂದಿದೆ.

Advertisement

ತಾಲೂಕಿನ ಐನಾಪುರ, ಚಿಮ್ಮನಚೋಡ, ಸಲಗರ ಬಸಂತಪುರ, ಸುಲೇಪೇಟ, ಗಡಿಕೇಶ್ವಾರ, ಚಂದನಕೇರಾ, ಮಿರಿಯಾಣ, ಕುಂಚಾವರಂ ಗ್ರಾಮಗಳಲ್ಲಿ ಬೆಳೆದ ತೊಗರಿ, ಹೆಸರು, ಉದ್ದು, ಸೋಯಾಬಿನ್‌ ಬೆಳೆಗಳಲ್ಲಿ ಎಡೆ ಹೊಡೆಯುತ್ತಿದ್ದಾರೆ. ಹೊಲದಲ್ಲಿ ಮಳೆ ನೀರು ನಿಂತುಕೊಂಡಿದ್ದರಿಂದ ಎತ್ತುಗಳ ಮೂಲಕ ಎಡೆ ಹೊಡೆಯದೇ ಬೆಳೆಗಳ ಸಾಲುಗಳಲ್ಲಿ ರೈತರು ತಾವೇ ಎಡೆ ಮಾಡಿಕೊಳ್ಳುತ್ತಿದ್ದಾರೆ. ಮಳೆಯಿಂದ ಬೆಳೆಗಳಲ್ಲಿ ಹುಲ್ಲು ವಿಪರೀತವಾಗಿ ಹೆಚ್ಚಾಗಿ ಬೆಳೆದಿರುವುದರಿಂದ ಕೃಷಿ ಚಟುವಟಿಕೆಗಳು ಹೆಚ್ಚು ನಡೆದಿವೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೊಡ ತಿಳಿಸಿದ್ದಾರೆ.

ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ಒಳಹರಿವು ಕಡಿಮೆ ಇದೆ. ಇದರಿಂದ ನದಿಗೆ ನೀರು ಹರಿದು ಬಿಡುತ್ತಿಲ್ಲವೆಂದು ಎಇಇ ಹಣಮಂತ ಪೂಜಾರಿ ತಿಳಿಸಿದ್ದಾರೆ.

ಚಂದ್ರಂಪಳ್ಳಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ. ಇನ್ನು ಗೇಟಿನ ಬಳಿ ನೀರು ಬಂದಿಲ್ಲ ಮುಂದಿನ ದಿನಗಳಲ್ಲಿ ನೀರು ಹತ್ತಿರ ಬರಲಿದೆ ಎಂದು ಎಇಇ ಚೇತನ ಕಳಸ್ಕರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next