Advertisement
ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ,ಜಿಪಂ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಇಲಾಖೆಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಮಹರ್ಷಿವಾಲ್ಮೀಕಿ ಸೇರಿದಂತೆ ಮಹಾನ್ ವ್ಯಕ್ತಿಗಳ ಆದರ್ಶಗಳನ್ನುಅಳವಡಿಸಿಕೊಂಡು ನಮ್ಮ ಸಂವಿಧಾನ ರಚನೆ ಮಾಡಲಾಗಿದೆ.ಎಲ್.ಜಿ. ಹಾವನೂರು ಅವರು ಕೊಟ್ಟ ವರದಿಯನ್ನು ಅಂದಿನಮುಖ್ಯಮಂತ್ರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಿದರು.ಈ ವರದಿಯು ವಾಲ್ಮೀಕಿ ಜನಾಂಗಕ್ಕೆ ಮಾತ್ರವಲ್ಲ, ಪ್ರತಿಯೊಂದುಜನಾಂಗಕ್ಕೂ ಭಗವದ್ಗೀತೆ ಎಂದರೂ ತಪ್ಪಾಗಲಾರದು.
ಎಲ್ಲವರ್ಗದ ಜನರಿಗೂ ಅನುಕೂಲ ಕಲ್ಪಿಸಿಕೊಡಲಾಗಿದೆ. ಎಲ್.ಜಿ.ಹಾವನೂರು ಅಂತಹವರು ಈ ಸಮಾಜದಲ್ಲಿ ಜನಿಸಿರುವುದುನಾಯಕ ಸಮಾಜಕ್ಕೆ ಕೀರ್ತಿ ತಂದಿದೆ. ವಾಲ್ಮೀಕಿ ಮಹರ್ಷಿಯವರಆದರ್ಶಗಳನ್ನು ಮುಂದಿನ ಪೀಳಿಗೆಯವರು ಅರ್ಥಮಾಡಿಕೊಂಡು ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ವಾಲ್ಮೀಕಿ ನಾಯಕ ನೌಕರರ ಸಂಘದ ಡಾ| ಎಚ್.ಗುಡ್ಡದೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಕಲಾಕಾಲೇಜಿನ ಸ್ನಾತಕೋತ್ತರ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಡಾ|ಬಿ. ಜಯಮ್ಮ ಮಹರ್ಷಿ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸನೀಡಿದರು. ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರಿನಾಥ್, ಜಿಲ್ಲಾ ವಾಲ್ಮೀಕಿ ನಾಯಕಸಮಾಜದ ಅಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ತಾಲೂಕು ವಾಲ್ಮೀಕಿನಾಯಕ ಸಮಾಜದ ಅಧ್ಯಕ್ಷ ಬಿ. ಕಾಂತರಾಜು, ಜಿಲ್ಲಾ ಧಿಕಾರಿಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾ ಕಾರಿ ಜಿ.ರಾಧಿ ಕಾ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್ ಸತ್ಯನಾರಾಯಣ, ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣಾಧಿ ಕಾರಿ ಎನ್. ಮಂಜುನಾಥ್,ನಗರಸಭೆ ಸದಸ್ಯ ದೀಪಕ್ ಮತ್ತಿತರರು ಉಪಸ್ಥಿತರಿದ್ದರು.