Advertisement
267 ಮಂದಿ ಸಾವು: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ತನ್ನ ತೀವ್ರತೆ ಹೆಚ್ಚಿಸಿಕೊಳ್ಳುತ್ತಾ ಎಲ್ಲಾ ಜನರಲ್ಲಿ ಹರಡುತ್ತಾ ವೇಗವನ್ನು ದಿನೇ ದಿನೆ ಹೆಚ್ಚಳ ಮಾಡಿಕೊಳ್ಳುತ್ತಲೇ ಇದ್ದು. ಈ ಸೋಂಕಿನಿಂದ ಮೃತಪಡುವವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಈವರೆಗೆ ಈ ಸೋಂಕಿಗೆ ಜಿಲ್ಲೆಯಲ್ಲಿ 267 ಜನ ಮೃತಪಟ್ಟಿರುವುದು ಆತಂಕ ಮೂಡಿಸಿದೆ.
Related Articles
Advertisement
ರೋಗ ನಿರೋಧಕ ಶಕ್ತಿ ಹೆಚ್ಚಿಕೊಳ್ಳಿ: ಜಿಲ್ಲೆಯಲ್ಲಿ ಈವರೆಗೂ 9232 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಗುಣಮುಖರಾದ ಸೋಂಕಿತರಲ್ಲಿ ಮತ್ತೂಮ್ಮೆ ಸೋಂಕು ದೃಢಪಡುವ ಸಾಧ್ಯತೆಯಿರುವುದರಿಂದ ಅವರೂ ಮುಂಜಾಗ್ರತೆಯಿಂದಿರಬೇಕು. ತಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು, ಸರ್ಕಾರದ ಮಾರ್ಗಸೂಚನೆಗಳನ್ನು ಅನುಸರಿಸುವುದರಿಂದ ರೋಗ ಹರಡುವಿಕೆಯನ್ನು ನಿಯಂತ್ರಿಸಬಹುದು ಎನ್ನುತ್ತಾರೆ ಜಿಲ್ಲಾ ಆರೋಗ್ಯಾಧಿಕಾರಿಗಳು.
ಹಾಸಿಗೆಗಳು ಸಾಕಾಗುತ್ತಿಲ್ಲ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯದಕೊರತೆ ಎದ್ದು ಕಾಣುತ್ತಿದೆ ಜಿಲ್ಲಾಕೇಂದ್ರ ತುಮಕೂರಿನಲ್ಲಿ 200 ಹಾಸಿಗೆ ಗಳು ಉಳಿದಂತೆ ಸಿದಾರ್ಥ ಆಸ್ಪತ್ರೆಯಲ್ಲಿ 110 ಶ್ರೀದೇವಿ ಆಸ್ಪತ್ರೆಯಲ್ಲಿ 125, ಅಶ್ವಿನಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ 150, ಸೂರ್ಯ ಆಸ್ಪತ್ರೆಯಲ್ಲಿ 30, ಪೃಥ್ವಿ ಆಸ್ಪತ್ರೆಯಲ್ಲಿ 30 ಹಾಸಿಗೆಗಳು ಇದ್ದು ಇಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಪ್ರತಿ ತಾಲೂಕಿನಲ್ಲಿ 50 ಹಾಸಿಗಳು ಲಭ್ಯವಿದೆ ಆದರೆ ಈಗ ಬರುತ್ತಿರುವ ಸೋಂಕಿತರ ಸಂಖ್ಯೆಗೆ ಈ ಹಾಸಿಗೆ ಗಳು ಸಾಕಾಗುತ್ತಿಲ್ಲ ಎನ್ನುವ ಮಾತುಕೇಳಿಬರುತ್ತಿದೆ.
ಮೂವರು ವೈದ್ಯರು ಸಾವು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆ ಅದರಲ್ಲಿಯೂ ಉಸಿರಾಟ ಸಮಸ್ಯೆಯಿಂದ ಬರುವವರ ಸಂಖ್ಯೆಯೂ ಹೆಚ್ಚಿದೆ ಎಲ್ಲಾ ಆಸ್ಪತ್ರೆಗಳನ್ನು ಸೇರಿಸಿದರೆ70 ಮಾತ್ರಐಸಿಯು ಸೌಲಭ್ಯವಿದೆ. ಜಿಲ್ಲೆಯಲ್ಲಿ200ಕ್ಕೂ ಹೆಚ್ಚು ವೈದ್ಯರು ನೂರಾರು ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ಕೋವಿಡ್‌ಕೆಲಸ ಮಾಡುತ್ತಿದ್ದಾರೆ. ಎಲ್ಲಾ ತಾಲೂಕುಗಳಲ್ಲಿ ಕೋವಿಡ್‌ಕೇರ್ ಸೆಂಟರ್ ಗಳಿವೆ ಇಲ್ಲಿಯವರೆಗೆ ಮೂರು ಜನ ವೈದ್ಯರು ಕೋವಿಡ್ ಗೆ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ.
ತುಮಕೂರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಅಧಿಕಾರಿಗಳುಕೋವಿಡ್-19 ನಿಯಂತ್ರಣವನ್ನು ಸಮರ್ಪಕವಾಗಿ ಮಾಡುತ್ತಿದೆ, ಜನರು ಮುನ್ನೆಚ್ಚರಿಕೆಯಿಂದಕೋವಿಡ್ ಜೊತೆಯಲ್ಲಿಯೇ ಬದುಕಲುಕಲಿಯಬೇಕು. ಸಾರ್ವಜನಿಕರು ತೀವ್ರತರವಾದ ಆರೋಗ್ಯ ಸಮಸ್ಯೆ ಉಂಟಾಗುವವರೆಗೂ ಕಾಯದೆ ರೋಗಿಯನ್ನು ಪ್ರಾಥಮಿಕ ಹಂತದಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾತ್ರ ಸಾವಿನ ಪ್ರಮಾಣ ತಗ್ಗಿಸಬಹುದು. –ಡಾ.ಕೆ.ರಾಕೇಶ್‌ಕುಮಾರ್, ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಅದೇ ರೀತಿ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮರಣ ಪ್ರಮಾಣ ಶೇ.3ರಷ್ಟು ಮಾತ್ರವಿದ್ದು, ಜನರು ಭಯಭೀತರಾಗಬಾರದು. ಜನರು ಎಚ್ಚೆತ್ತು ರೋಗಲಕ್ಷಣ ಕಂಡ ಕೂಡಲೇ ವೈದ್ಯಕೀಯ ತಪಾಸಣೆಗೊಳಗಾಗಬೇಕು. – ಡಾ.ಎಂ.ಬಿ.ನಾಗೇಂದ್ರಪ್ಪ, ಡಿಎಚ್‌ಒ
ಜಿಲ್ಲಾಸ್ಪತ್ರೆಯಲಿ ಕೋವಿಡ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿದೆ, ಜನರು ಕೋವಿಡ್ ರೋಗ ಲಕ್ಷಣ ಬಂದ ತಕ್ಷಣ ತಪಾಸಣೆ ಮಾಡಿಸಿ ಕೊಂಡು ಚಿಕಿತೆ ಪಡೆಯಿರಿ, ಈವರೆಗೆ 9232 ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. –ಡಾ.ವೀರಭದ್ರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ
ಚಿ.ನಿ.ಪುರುಷೋತ್ತಮ್