Advertisement

ಬಿಜೆಪಿಗೆ ತಟ್ಟಿದ ಬಂಡಾಯದ ಬಿಸಿ

11:38 PM Nov 18, 2019 | Lakshmi GovindaRaj |

ಬೆಂಗಳೂರು: ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಪೂರ್ಣಗೊಂಡಿದ್ದು, ಬಿಜೆಪಿಗೆ ಎರಡು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದೆ. ಗೋಕಾಕ್‌ ಕ್ಷೇತ್ರದಲ್ಲಿ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ ಅಶೋಕ್‌ ಪೂಜಾರಿ ಯವರು ಜೆಡಿಎಸ್‌ನಿಂದ ಕಣಕ್ಕಿಳಿದಿದ್ದಾರೆ. ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕವಿರಾಜ್‌ ಅರಸ್‌ ನಾಮಪತ್ರ ಸಲ್ಲಿಸಿದ್ದಾರೆ.

Advertisement

ತೀವ್ರ ಕುತೂಹಲ ಮೂಡಿಸಿರುವ ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್‌ ಬಚ್ಚೇಗೌಡ, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಈ ಮಧ್ಯೆ ಬಚ್ಚೇಗೌಡ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದ ಉಸ್ತುವಾರಿಗಳ ಪೈಕಿ ಒಬ್ಬರಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ನಾಮಪತ್ರ ಸಲ್ಲಿಕೆ ವೇಳೆ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತ ಎನ್ನಲಾದ ಗುರು ದಾಸ್ಯಾಳ್‌ ಜೆಡಿಎಸ್‌ನಿಂದ ಕಣಕ್ಕಿಳಿದಿರುವುದು ಬಿಜೆಪಿ ನಾಯಕರಿಗೆ ತಲೆ ನೋವಾಗಿದೆ. ಗುರುವಾರ ನಾಮಪತ್ರ ಹಿಂಪಡೆಯಲು ಕಡೆದಿನ. ಅಲ್ಲಿಯವರೆಗೆ ಕಾದು ನೋಡಿ, ಬಂಡಾಯ ಅಭ್ಯರ್ಥಿಗಳು ಹಿಂದೆ ಸರಿಯ ದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next