Advertisement

ಕವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ಅಕ್ರಮ?

09:39 AM Apr 28, 2022 | Team Udayavani |

ಧಾರವಾಡ: ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ ಸದ್ದು ಮಾಡುತ್ತಿರುವಾಗಲೇ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕದಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒಕ್ಕೊರಲ ಆಗ್ರಹ ಕೇಳಿ ಬಂದಿದೆ.

Advertisement

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ|ಎಚ್‌.ನಾಗರಾಜ್‌ ಅವರಿಗೂ ವಿಚಾರಣೆಗೆ ಬುಲಾವ್‌ ನೀಡಿದ್ದಾರೆ. ಮೈಸೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಸೌಮ್ಯಾ ಅವರು ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಬರೆಯುವಾಗ ಅವರ ಮೊಬೈಲ್‌ ನಿಂದ ಪ್ರಶ್ನೆಗಳು ಸೋರಿಕೆಯಾಗಿದ್ದವು ಎನ್ನುವ ಆರೋಪವಿದೆ.

ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಲ್ಲೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ನಂತರ ಸೌಮ್ಯಾ ಬಂಧನವಾಗಿತ್ತು. ಇದೀಗ ಸೌಮ್ಯಾ ಬಂಧನದ ನಂತರ ಪ್ರೊ|ನಾಗರಾಜ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕವಿವಿ ಕುಲಪತಿ ಪ್ರೊ|ಗುಡಸಿ, ನಾಗರಾಜ್‌ ಅವರು ಸಿಐಡಿ ವಿಚಾರಣೆಗೆ ಹೋಗಿದ್ದಾರೆ. ಅವರ ಬಂಧನವಾಗಿದೆಯೋ ಇಲ್ಲವೋ ನನಗೆ ಮಾಹಿತಿ ಇಲ್ಲ. ಸೌಮ್ಯಾ ಎಂಬುವರು ನಾಗರಾಜ್‌ ಅವರ ವಿದ್ಯಾರ್ಥಿನಿಯಾಗಿದ್ದರು. ಅದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹೋಗಿದ್ದಾರೆ. ಬಂಧನದ ವಿಚಾರ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next