Advertisement

KPSC: ನನೆಗುದಿಗೆ ಬಿದ್ದಿದ್ದ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ

12:24 AM Feb 03, 2024 | Team Udayavani |

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮೀಸಲಾತಿ ನಿಯಮಗಳಂತೆ ವರ್ಗೀಕರಿಸಿ ಪ್ರಸ್ತಾವನೆಯನ್ನು ಶುಕ್ರವಾರ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ಕ್ಕೆ ಕಳುಹಿಸಿದೆ.

Advertisement

ಗ್ರೂಪ್‌ “ಎ’ ಮತ್ತು ಗ್ರೂಪ್‌ “ಬಿ’ಯಲ್ಲಿನ ಒಟ್ಟಾರೆ 384 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಆಯ್ಕೆ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಕೆಪಿಎಸ್ಸಿಗೆ ಪ್ರಸ್ತಾವನೆ ಕಳುಹಿಸಿದೆ. ಈ ಮೂಲಕ ನನೆಗುದಿಗೆ ಬಿದ್ದಿದ್ದ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಂತಾಗಿದೆ.

ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಾಣಿಜ್ಯ ತೆರಿಗೆ, ಖಜಾನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಒಳಾಡಳಿತ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕಂದಾಯ, ಕಾರ್ಮಿಕ, ಸಹಕಾರ, ಆರ್ಥಿಕ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ಯುವ ಸಬಲೀಕರಣ ಮತ್ತು ಕ್ರೀಡಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ, ಸಚಿವಾಲಯ ಸೇರಿ ವಿವಿಧ ಇಲಾಖೆಗಳ ಗ್ರೂಪ್‌ “ಎ’ನಲ್ಲಿ 159 ಮತ್ತು ಗ್ರೂಪ್‌ “ಬಿ’ನಲ್ಲಿ 225 ಹುದ್ದೆಗಳ ನೇಮಕಾತಿಗೆ (ಕಲ್ಯಾಣ ಕರ್ನಾಟಕ ಸೇರಿ) ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ ಧೋರಣೆ ಖಂಡಿಸಿ ಮಾಜಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಇತ್ತೀಚೆಗಷ್ಟೇ ಕೆಪಿಎಸ್ಸಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next