Advertisement
ನವೆಂಬರ್ ತಿಂಗಳು ನಿರ್ಮಾಪಕ ಕೆ. ಮಂಜು ಅವರಿಗೆ ಲಕ್ಕಿ ತಿಂಗಳು ಎನ್ನಲಾಗಿದ್ದು, ಕೆ. ಮಂಜು ನಿರ್ಮಾಣದ ಬಹುತೇಕ ಹಿಟ್ ಚಿತ್ರಗಳು ಇದೇ ತಿಂಗಳಿನಲ್ಲಿ ತೆರೆಗೆ ಬಂದಿದ್ದವು. ಹಾಗಾಗಿ ಈ ಬಾರಿ ಕೂಡ ಕೆ. ಮಂಜು ನವೆಂಬರ್ 8ಕ್ಕೆ ಚಿತ್ರವನ್ನು ತೆರೆಗೆ ತರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಹಿಂದೆ ರವಿಚಂದ್ರನ್ “ದೃಶ್ಯ’ ಸಿನಿಮಾದಲ್ಲಿ ಅಭಿನಯಿಸಿ ಪ್ರೇಕ್ಷಕರಿಗೆ ಇಷ್ಟವಾಗಿದ್ದರು.
Related Articles
ವರನಟ ರಾಜಕುಮಾರ್, ಸಾಹಸಸಿಂಹ ವಿಷ್ಣುವರ್ಧನ್, ರೆಬಲ್‌ಸ್ಟಾರ್ ಅಂಬರೀಶ್, ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ನಂತರ ಕನ್ನಡದ ಮತ್ತೂಬ್ಬ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಗೌರವ ಡಾಕ್ಟರೇಟ್ ಪದವಿಗೆ ಪಾತ್ರವಾಗುತ್ತಿದ್ದಾರೆ. ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್‌ಗೆ ರವಿಚಂದ್ರನ್ ಅವರನ್ನು ಆಯ್ಕೆ ಮಾಡಲಾಗಿದ್ದು, ನ. 3 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರಿಗೆ ಸಿಎಮ್‌ಆರ್ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಧಾನ ಮಾಡಲು ತಯಾರಿ ಮಾಡಿಕೊಂಡಿದೆ ಎನ್ನಲಾಗಿದೆ.
Advertisement
ಈ ಹಿಂದೆ ಕೂಡ ಹಲವು ಬಾರಿ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬಾರಿ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸುವ ಮೂಲಕ ಅಭಿಮಾನಿಗಳ ಹಲವು ವರ್ಷದ ಆಸೆ ಈಡೇರಿದಂತಾಗಿದೆ.
ನಿರ್ಮಾಪಕ ವೀರಾಸ್ವಾಮಿ ಪುತ್ರ ರವಿಚಂದ್ರನ್ 1971ರಲ್ಲಿ ಬಾಲನಟನಾಗಿ “ಕುಲ ಗೌರವ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯವಾದ ರವಿಚಂದ್ರನ್, ನಂತರ ನಾಯಕ, ನಿರ್ದೇಶಕ, ನಿರ್ಮಾಪಕ, ಗೀತ ರಚನೆಗಾರ, ಸಂಗೀತ ನಿರ್ದೇಶಕ, ಸಂಭಾಷಣೆಕಾರನಾಗಿ ಚಿತ್ರರಂಗದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವ ರವಿಚಂದ್ರನ್, ಸದ್ಯ “ಆ ದೃಶ್ಯ’, “ರಾಜೇಂದ್ರ ಪೊನ್ನಪ್ಪ’, “ರವಿ ಬೊಪ್ಪಣ್ಣ’ ಚಿತ್ರಗಳಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.