Advertisement

ಕೃಷಿ ಕಾಯ್ದೆಗಳ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ : ಹೆಚ್.ಡಿ.ಕುಮಾರಸ್ವಾಮಿ

11:12 AM Nov 19, 2021 | Team Udayavani |

ಬೆಂಗಳೂರು: ‘ರೈತರ ಜತೆ ಚರ್ಚೆ ನಡೆಸದೇ ಕೃಷಿ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ’ ಎಂದು ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಾಸ್ ಪಡೆದ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

Advertisement

‘ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ’ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

‘ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು’ ಎಂದು ಸಲಹೆ ನೀಡಿದ್ದಾರೆ.

‘ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ’ ಎಂದು ಟ್ವೀಟ್ ಗಳಲ್ಲಿ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next