Advertisement

22ರಂದು ಹೇರೂರ (ಬಿ) ಗ್ರಾಮದಲ್ಲಿ ಸಿಎಂ ವಾಸ್ತವ್ಯ

11:03 PM Jun 09, 2019 | Lakshmi GovindaRaj |

ಕಲಬುರಗಿ: ಸಿಎಂ ಎಚ್‌.ಡಿ. ಕುಮಾರಸ್ವಾಮಿ ಜೂ.22ರಂದು ಗ್ರಾಮ ವಾಸ್ತವ್ಯಕ್ಕೆ ಜಿಲ್ಲೆಯ ಅಫಜಲಪುರ ತಾಲೂಕಿನ ಹೇರೂರ (ಬಿ) ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದು, ಭಾನುವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸಿಎಂ ಕುಮಾರಸ್ವಾಮಿ ತಂಗುವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಾರ್ವಜನಿಕ ಸಮಾರಂಭ, ಜನತಾ ದರ್ಶನ ನಡೆಯುವ ಜೋಗುರ ರಸ್ತೆಯ ಹುಲಿಕಂಟೇಶ್ವರ ದೇವಸ್ಥಾನ ಪಕ್ಕದ ಸ್ಥಳವನ್ನು ಪರಿಶೀಲಿಸಿದರು.

ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿ, ಸಿಎಂ ಗ್ರಾಮ ವಾಸ್ತವ್ಯ ಕುರಿತು ಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಗ್ರಾಮಕ್ಕೆ ಭೇಟಿ ನೀಡಿ ಖುದ್ದು ಪರಿಶೀಲಿಸಿದ್ದೇನೆ. ಸಿಎಂ ತಂಗುವ ಶಾಲೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಅಧಿ ಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕ ಸಮಾರಂಭ ಮತ್ತು ಜನತಾ ದರ್ಶನ ಕಾರ್ಯಕ್ರಮಕ್ಕೆ 8-10 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next