Advertisement

ಇಬ್ಬರ ರಾಜೀನಾಮೆಯಿಂದ ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ: ಎಂಬಿ ಪಾಟೀಲ್

09:28 AM Jul 02, 2019 | Nagendra Trasi |

ಬೆಳಗಾವಿ: ರಮೇಶ್ ಜಾರಕಿಹೊಳಿ ಬಹಳ ದಿನದಿಂದ ರಾಜೀನಾಮೆ ಬಗ್ಗೆ ಮಾತನಾಡುತ್ತಿದ್ದರು. ಇಬ್ಬರ ರಾಜೀನಾಮೆಯಿಂದ ಏನೂ ಆಗುವುದಿಲ್ಲ ಎಂದು ಗೃಹ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಸಂಬಂಧಿಸಿದಂತೆ ಸುದ್ದಿಗಾರರ ಜತೆ ಮಾತನಾಡಿದ ಅವರು, 15 ಶಾಸಕರು ರಾಜೀನಾಮೆ ನೀಡಿದರೆ ಮಾತ್ರ ಸರ್ಕಾರಕ್ಕೆ ಸಮಸ್ಯೆ ಆಗುತ್ತದೆ ಎಂದರು.

ಒಬ್ಬರೋ, ಇಬ್ಬರೋ ರಾಜೀನಾಮೆ ಕೊಟ್ಟರೆ ಏನೂ ಸಮಸ್ಯೆ ಆಗಲ್ಲ. ಅವಶ್ಯಕತೆ ಬಿದ್ದರೆ ನಮ್ಮ ಪಕ್ಷದವರೇ ಅವರ ಮನವೊಲಿಸುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next