Advertisement
ಸಿದ್ದರಾಮಯ್ಯ- ತವರು ಕ್ಷೇತ್ರದಲ್ಲಿ ಸೋಲನುಭವಿಸಿದರೂ ಹಲವು ಕಾರಣಗಳಿಂದ ಮುಖ್ಯಮಂತ್ರಿ ಈ ಫಲಿತಾಂಶದಿಂದ ತಕ್ಕಮಟ್ಟಿಗೆ ತೃಪ್ತರಾಗಿದ್ದಾರೆ. ಯಾಕೆಂದರೆ, ತಮ್ಮ ಬಣದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಅಭ್ಯರ್ಥಿಗಳನ್ನು ಗೆಲುವಿನ ದಡ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಫಲಿತಾಂಶ ಹೊರಬೀಳುವ ಕೇವಲ ಎರಡು ದಿನಗಳ ಹಿಂದಷ್ಟೇ ತಮ್ಮ ಪುತ್ರನನ್ನು ಮೇಲ್ಮನೆ ಪ್ರವೇಶ ಖಚಿತಗೊಂಡಿದೆ. ಇದಕ್ಕೆ ಪ್ರತಿಯಾಗಿ ತಮ್ಮ ಎದುರಾಳಿ ಬಣಕ್ಕೆ ಹಿನ್ನಡೆಯಾಗಿದೆ. ಈ ಮೂಲಕ ಸಹಜವಾಗಿ ಮೇಲುಗೈ ಸಾಧಿಸಿದಂತಾಗಿದೆ.
ಎಂಟು ಜನ ಒಕ್ಕಲಿಗರಿಗೆ ಟಿಕೆಟ್ ಕೊಡಿಸಿದ್ದಾಗಿ ಸ್ವತಃ ಡಿಸಿಎಂ ಹೇಳಿಕೊಂಡಿದ್ದರು. ಆದರೆ, ಅದರಲ್ಲಿ ಒಬ್ಬರು ಮಾತ್ರ ಗೆದ್ದಿದ್ದಾರೆ. ಇದರ ನಡುವೆ ಅಧಿಕಾರಕ್ಕೆ ಬರುತ್ತಿದ್ದಂತೆ ಒಕ್ಕಲಿಗ ಸಮುದಾಯದ ನಾಯಕನನ್ನಾಗಿ ಬಿಂಬಿಸಿಕೊಳ್ಳಲು ಯತ್ನಿಸಿದ್ದರು. ಅದರಲ್ಲಿ ಭಾಗಶಃ ಯಶಸ್ವಿಯೂ ಆಗಿದ್ದರು ಎನ್ನಲಾಗಿತ್ತು. ಆದರೆ, ಫಲಿತಾಂಶ ಆ ಲೆಕ್ಕಾಚಾರವನ್ನು ತಿರುವು ಮುರುವುಗೊಳಿಸಿತು. ಇದಕ್ಕೆ ಪೂರಕವಾಗಿ ಸ್ವತಃ ಡಿ.ಕೆ. ಶಿವಕುಮಾರ್, “ಈ ಫಲಿತಾಂಶದ ಮೂಲಕ ಜನ ನನಗೆ ಸಂದೇಶ ನೀಡಿದ್ದಾರೆ. ಅದನ್ನು ಅರ್ಥಮಾಡಿಕೊಳ್ಳುತ್ತೇನೆ. ಎಲ್ಲೆಲ್ಲಿ ತಪ್ಪಾಗಿದೆ ಎಂಬುದನ್ನು ಪರಿಶೀಲಿಸಿ, ಸರಿಪಡಿಸಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.
Related Articles
Advertisement
ಮಲ್ಲಿಕಾರ್ಜುನ ಖರ್ಗೆ- ಈ ಹಿಂದಿನ ಚುನಾವಣೆಯಲ್ಲಿ ತಮ್ಮ ಸೋಲು ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲೇ ತೀವ್ರ ಹಿನ್ನಡೆ ಅನುಭವಿಸಿದ್ದ ಎಐಸಿಸಿ ಅಧ್ಯಕ್ಷರು, ಪ್ರಸಕ್ತ ಚುನಾವಣೆಯಲ್ಲಿ ತಮ್ಮ ಬದಲಿಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿ ಐದು ಕಡೆ (ಕಲಬುರಗಿ, ರಾಯಚೂರು, ಕೊಪ್ಪಳ, ಬೀದರ್, ಬಳ್ಳಾರಿ) ಗೆದ್ದಿದ್ದಾರೆ. ಒಟ್ಟಾರೆ 9ರಲ್ಲಿ ಅರ್ಧಕ್ಕಿಂತ ಹೆಚ್ಚು ಕಲ್ಯಾಣ ಕರ್ನಾಟಕದಿಂದಲೇ ಬಂದಿವೆ. ಇದರೊಂದಿಗೆ ಆ ಭಾಗದಲ್ಲಿ ಮತ್ತೆ ತಮ್ಮ ಹಿಡಿತ ಸಾಧಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲ, ಪಕ್ಷದಲ್ಲೂ ತಮ್ಮ ಪ್ರಭಾವ ಮತ್ತಷ್ಟು ವಿಸ್ತಾರಗೊಂಡಂತಾಗಿದೆ. ಮತ್ತೊಂದೆಡೆ ರಾಷ್ಟ್ರಮಟ್ಟದಲ್ಲೂ ತಮ್ಮ ಅಧ್ಯಕ್ಷತೆಯಲ್ಲಿ ಎದುರಿಸಿದ ಈ ಚುನಾವಣೆಯಲ್ಲಿ ಮೋದಿ ಅವರಿಗೆ ಜೋರಾಗಿ ಟಕ್ಕರ್ ನೀಡುವಲ್ಲಿ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದಾರೆ. ಇದು ಕೂಡ ಅವರ ವರ್ಚಸ್ಸು ಹೆಚ್ಚುವಂತೆ ಮಾಡಿದೆ.