Advertisement
ಕಾಂಗ್ರೆಸ್ ನಾಯಕ ಎಂ.ವೀರಪ್ಪ ಮೊಲಿ, ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಈ ಬಗ್ಗೆ ರವಿವಾರ ಬಹಿರಂಗವಾಗಿಯೇ ಮಾತನಾಡಿದ್ದಾರೆ. ಅದಕ್ಕೆ ಚಾಲನೆ ಸಿಕ್ಕಿದ್ದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಹೇಳಿಕೆ. ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೆಸಿಆರ್ ಅವರು, ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ರಾಜಕೀಯ ಮೈತ್ರಿಕೂಟ ರಚನೆಯಾಗಬೇಕು ಎಂದಿದ್ದರು. ಅದನ್ನೇ ಪುಷ್ಟೀಕರಿಸಿರುವ ಅಸಾದುದ್ದೀನ್ ಒವೈಸಿ, ದೂರದೃಷ್ಟಿ ಇರಿಸಿಕೊಂಡು ತೆಲಂಗಾಣ ಮುಖ್ಯಮಂತ್ರಿ ಪರ್ಯಾಯ ರಾಜಕೀಯ ಒಕ್ಕೂಟ ರಚನೆಯ ಮಾತುಗಳನ್ನಾಡಿದ್ದಾರೆ. ಈ ನಿಟ್ಟಿನಲ್ಲಿ ಅವರೇ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.
Related Articles
Advertisement
ದೇಶ ಕಾಂಗ್ರೆಸ್ ಮುಕ್ತ ಭಾರತವಾಗುತ್ತದೆ ಎಂಬ ವಾದವನ್ನು ತಿರಸ್ಕರಿಸಿದ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ಎಡಪಕ್ಷಗಳೇ ಇಲ್ಲದಂತಾಗುತ್ತವೆ. ಆದರೆ, ಕಾಂಗ್ರೆಸ್ ಮಧ್ಯಪ್ರೇಶದ ಉಪಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಿದೆ. ರಾಜಸ್ಥಾನದಲ್ಲೂ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉ.ಪ್ರ.ಉಪ ಚುನಾವಣೆ: ಎಸ್‌ಪಿಗೆ ಬೆಂಬಲ ಇಲ್ಲಕರ್ನಾಟಕ ಹೊರತುಪಡಿಸಿ ಬೇರೆ ಯಾವುದೇ ರಾಜ್ಯ ಗಳಲ್ಲಿ ಇತರ ಪಕ್ಷಗಳ ಜತೆ ಚುನಾವಣಾ ಹೊಂದಾ ಣಿಕೆ ಇಲ್ಲ ಎಂದಿದ್ದಾರೆ ಬಿಎಸ್‌ಪಿ ನಾಯಕಿ ಮಾಯಾವತಿ. ಉತ್ತರ ಪ್ರದೇಶದ ಗೋರಖ್‌ಪುರ, ಫೂಲ್ಪುರ ಲೋಕಸಭೆ ಕ್ಷೇತ್ರಗಳಿಗೆ ಮಾ.11ರಂದು ನಡೆಯಲಿರುವ ಉಪ ಚುನಾವಣೆ ಯಲ್ಲಿ ಸಮಾಜವಾದಿ ಪಕ್ಷಕ್ಕೆ ಬೆಂಬಲ ನೀಡಲಾಗುತ್ತದೆ ಎಂದು ಪಕ್ಷದ ನಾಯಕರೊಬ್ಬರು ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಆದರೆ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವುದು ಖಚಿತವಾಗಿದೆ. ಲಕ್ನೋದಲ್ಲಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಎಸ್‌ಪಿ ನಡುವೆ ಮೈತ್ರಿ ಮಾಡುವ ವಿಚಾರ ಇದ್ದರೆ ಅದನ್ನು ಸಾರ್ವಜನಿಕವಾಗಿ ಘೋಷಿಸಲಾಗುತ್ತದೆ. ರಹಸ್ಯವಾಗಿ ಏನನ್ನೂ ಮಾಡುವುದಿಲ್ಲ ಎಂದಿದ್ದಾರೆ. ಮೈತ್ರಿಕೂಟ ಮಾತುಕತೆ ಚುರುಕು
ತ್ರಿಪುರ ಫಲಿತಾಂಶದಿಂದ ಕಂಗೆಟ್ಟಿರುವ ಸಿಪಿಎಂ, ಹಾಲಿ ಹಿನ್ನಡೆಗೆ ಪಕ್ಷದ ಮಾಜಿ ಪ್ರಧಾನ ಕಾರ್ಯ ದರ್ಶಿ ಪ್ರಕಾಶ್ ಕಾರಟ್ ಕಾರಣ ಎಂದು ಸೀತಾ ರಾಮ್ ಯೆಚೂರಿ ಬೆಂಬಲಿಗರು ದೂರಿದ್ದಾರೆ. ಬಿಜೆಪಿ ವಿರೋಧಿ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳದೇ ಇರುವ ಕಾರಟ್ ನಿಲುವಿನಿಂದಲೇ ಸೋಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಡುವೆ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎಪ್ರಿಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಸೋಲಿನ ಕಾರಣಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿರುವ ಆಯ್ಕೆಗಳನ್ನು ಮತದಾರರಿಗೆ ನೀಡಬೇಕಾಗಿತ್ತು ಎಂದು ಪಶ್ಚಿಮ ಬಂಗಾಲದ ಸಿಪಿಎಂ ನಾಯಕರೊ ಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಬಗ್ಗೆ ಪ್ರಕಾಶ್ ಕಾರಟ್ ಬೆಂಬಲಿಗರು ಒಪ್ಪಲಿಲ್ಲ ಎಂದು ತಿಳಿಸಿದ್ದಾರೆ.