Advertisement

ಫ‌ಲಿತಾಂಶಕ್ಕೆ ವಿದ್ಯಾರ್ಥಿಗಳ ಪರಿಶ್ರಮವೂ ಕಾರಣ

02:16 AM May 03, 2019 | Sriram |

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹಾಸನ ಹಾಗೂ ರಾಮನಗರ ಜಿಲ್ಲೆಗಳು ರಾಜ್ಯದಲ್ಲೇ ಮೊದಲ ಎರಡು ಸ್ಥಾನ ಪಡೆಯಲು ಶಿಕ್ಷಣ ಇಲಾಖೆಯ ಸುಧಾರಣಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರು, ಪೋಷಕರ ಮಾರ್ಗದರ್ಶನವೂ ಕಾರಣ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಹಾಸನ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇನೆ. ಶಿಕ್ಷಣ ಇಲಾಖೆಯ ಪರಿಹಾರ ಬೋಧನೆಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು ಉತ್ತಮ ಫ‌ಲಿತಾಂಶ ಬರಲು ಕಾರಣ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ 7 ನೇ ಸ್ಥಾನಕ್ಕೆ ಕುಸಿದಿದೆ ಎಂದು ವಿಷಾದಿಸಬೇಕಾಗಿಲ್ಲ. ಏಕೆಂದರೆ, ಕಳೆದ ವರ್ಷಕ್ಕಿಂತ ಉತ್ತಮ ಫ‌ಲಿತಾಂಶ ಇಲ್ಲಿ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಹುತೇಕ ಜಿಲ್ಲೆಗಳ ಶೇಕಡಾವಾರು ಫ‌ಲಿತಾಂಶದಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಇನ್ನಷ್ಟು ಉತ್ತಮ ಸಾಧನೆ ತೋರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಕಲಿಕೆಯ ಗುಣಮಟ್ಟ ಸುಧಾರಣೆಗೂ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next