Advertisement
ಸರ್ಕಾರಿ ನೌಕರರ ನೇಮಕಾತಿಗೆ ಸಂಬಂಧಿಸಿದಂತೆ 3 ವರ್ಷಗಳಿಗೊಮ್ಮೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಬೇಕು ಎಂಬ ನಿಯಮವಿದ್ದರೂ ಅನೇಕ ಇಲಾಖೆಗಳು ಇನ್ನೂ 2-3 ದಶಕಗಳ ಹಿಂದಿನ ನೇಮಕಾತಿ ನಿಯಮಗಳ್ನನೇ ಅನುಸರಿಸುತ್ತಿವೆ. ಈ ಬಗ್ಗೆ 2004, 2008, 2011,2015 ಮತ್ತು 2017ರ ಜೂನ್ ತಿಂಗಳಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದರು. ಅದರಲ್ಲೂ 2017ರ ಜೂನ್ ತಿಂಗಳಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ಒಂದು ತಿಂಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರವಾಗಿ ಪರಿಷ್ಕರಣೆ ಮಾಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದ್ದರು.
ಸಂಬಂಧಿಸಿದಂತೆ ಮಾತ್ರ ತಿದ್ದುಪಡಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕಳೆದ 10 ವರ್ಷಗಳಿಂದ ಪರಿಷ್ಕರಿಸದೇ ಇರುವ ಇಲಾಖೆಗಳು ಇನ್ನು 1 ತಿಂಗಳಲ್ಲಿ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಂಡು ಇಲಾಖೆ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿಯವರ ಅಧ್ಯಕ್ಷತೆಯ ವೃಂದ ಪರಿಶೀಲನಾ ಉಪ ಸಮಿತಿ ಸಭೆಯಲ್ಲಿ ಪ್ರಸ್ತಾವನೆಗಳನ್ನು ಚರ್ಚಿಸಬೇಕು. ನಂತರ ಕರಡು ನಿಯಮಗಳನ್ನು ಸಂಸದೀಯ ವ್ಯವಹಾರಗಳ ಇಲಾಖೆಯಿಂದ ಪರಿಶೋಧಿಸಿಕೊಂಡು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿರುವ ಸಮಿತಿ ಮುಂದೆ ಮಂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ಟಿ.ಎಂ.ವಿಜಯಭಾಸ್ಕರ್ ಡಿ.15ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ. ಇಲಾಖೆಗಳು ಮಾತ್ರವಲ್ಲದೆ, ಇದುವರೆಗೆ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆ ಮಾಡದೇ ಇರುವ ಅವುಗಳಡಿ ಕಾರ್ಯನಿರ್ವಹಿಸುವ ಸ್ಥಳೀಯ ಸಂಸ್ಥೆಗಳು, ನಿಗಮ-ಮಂಡಳಿ, ಸ್ವಾಯತ್ತ ಸಂಸ್ಥೆಗಳು ಕೂಡ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳ ನಂತರ ನೇಮಕಾತಿ ನಿಯಮಗಳ ಸಮಗ್ರ ಪರಿಷ್ಕರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲು ಇಲಾಖಾವಾರು ಸಭೆಗಳನ್ನು ನಡೆಸಬೇಕು ಎಂದೂ ತಿಳಿಸಿದ್ದಾರೆ.
Related Articles
ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕಾಲಕಾಲಕ್ಕೆ ಪರಿಷ್ಕರಿಸುವುದರಿಂದ ಇಲಾಖೆಯ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಹತೆ ಮತ್ತು ತಾಂತ್ರಿಕ ಪರಿಣತಿ ಹೊಂದಿರುವ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಇದಲ್ಲದೆ, ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಮಾಣವನ್ನು ನಿರ್ಧರಿಸಿ ವೃಂದ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲು ಅನುಕೂಲವಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Advertisement