Advertisement
ಈ ಕುರಿತ ಆದೇಶವನ್ನು ತಾತ್ಕಾಲಿಕ ವಾಗಿ ತಡೆ ಹಿಡಿಯಲಾಗಿದೆ ಎಂದು ಮಂಗಳವಾರವಷ್ಟೇ ಸುತ್ತೋಲೆ ಹೊರಡಿಸಿದ್ದ ಪೊಲೀಸ್ ಇಲಾಖೆ, ಈಗ 2-3 ದಿನಗಳೊಳಗಾಗಿ ಅದನ್ನು ಇತ್ಯರ್ಥ ಪಡಿಸಲಾಗುವುದು ಎಂದು ಮತ್ತೂಂದು ಸುತ್ತೋಲೆ ಹೊರಡಿಸಿದೆ.
ವೇತನ ಪರಿಷ್ಕರಣೆಯನ್ನು ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಕಾರಾಗೃಹ ಇಲಾಖೆಗೂ ವಿಸ್ತರಿಸಲು ಸಂಪುಟ ಸಭೆ ತೀರ್ಮಾನಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಈಗಾಗಲೇ ಪೊಲೀಸ್ ಇಲಾಖೆ ನೌಕರರ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಕಾರಾಗೃಹ ಇಲಾಖೆಗೂ ಅನ್ವಯಿಸುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆ ಹಿಡಿದಿರಬಹುದು. ಅಗ್ನಿಶಾಮಕ, ತುರ್ತು ಸೇವೆಗಳು ಹಾಗೂ ಕಾರಾಗೃಹ ಇಲಾಖೆಗೂ ವೇತನ ಪರಿಷ್ಕರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.