Advertisement

ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ

05:42 AM Jun 17, 2020 | Lakshmi GovindaRaj |

ಮೈಸೂರು: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಅಂಚೆ ಪತ್ರ ಚಳವಳಿ ನಡೆಸಲಾಯಿತು. ಮಹಾನಗರ ಪಾಲಿಕೆ  ಎದುರು ಚಳವಳಿಗಾರರು ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು.

Advertisement

ದಿವಂಗತ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿ ಇನ್ನಷ್ಟು ಬಲಪಡಿಸಿ ಉಳುವವನನೇ ಭೂ ಒಡೆಯರನ್ನಾಗಿ ಮಾಡಿದ್ದರು. ಆದರೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಉಳುವವರನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆಂದು ವಿಷಾದಿಸಿದರು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್‌ ಕ್ಷೇತ್ರದ ಖಾಸಗೀಕರಣ, ಬೀಜಗೊಬ್ಬರಗಳ ಮೇಲೆ  ಜಿಎಸ್‌ಟಿ ಹೀಗೆ ರೈತರ ಮೇಲೆ ಪ್ರಹಾರ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ರೈತರಿಂದ ಭೂಮಿಯನ್ನೇ ಕಿತ್ತುಕೊಳ್ಳಲು ಹೊರಟಿದೆ. ಹಸಿರು ಶಾಲು ಹೊದ್ದು ತಾವೊಬ್ಬ ರೈತ ನಾಯಕ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದಿರುವ ಸಿಎಂ ಯಡಿಯೂರಪ್ಪ ಮುಖವಾಡ  ಕಳಚಿ ಬಿದ್ದಿದೆ.

ಹೀಗಾಗಿ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮು, ದಲಿತ  ಸಂಘಟನೆಗಳ ಒಕ್ಕೂಟದ ಸಂಚಾಲಕ ರಾಜು, ಜಿಲ್ಲಾ ಸವಿತಾ  ಸಮಾಜದ ಜಿಲ್ಲಾಧ್ಯಕ್ಷ ನಾಗೇಶ್‌, ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ ಪ್ರಕಾಶ್‌, ಲೋಕೇಶ್‌ ಕುಮಾರ್‌, ರವಿ, ತ್ಯಾಗರಾಜ ನೀಹಲ್‌, ಬಸವಣ್ಣ, ಸ್ವಾಮಿ, ಮಹೇಂದ್ರ, ಪ್ರಸನ್ನ,  ಪುನೀತ್‌, ಸ್ವಾಮಿಗೌಡ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next