Advertisement
ಮಹಾಮಾರಿ ಕೋವಿಡ್ ದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲು ಪ್ರತಿಯೊಬ್ಬ ಕುಟುಂಬದ ಸದಸ್ಯರು ಇಚ್ಛೆಪಡುತ್ತಾರೆ. ಆದರೆ ಕೋವಿಡ್ ಸೋಂಕು ಹರಡುತ್ತದೆ ಎನ್ನುವ ಭಯದಿಂದ ಸರ್ಕಾರವು ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯ ಸಂಸ್ಕಾರ ಮಾಡಲು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸದೇ ತಾವೇ ಬೇಕಾಬಿಟ್ಟಿಯಾಗಿ ಅಂತ್ಯ ಸಂಸ್ಕಾರ ಮಾಡುತ್ತಿದ್ದರು. ಈ ಹಿಂದೆ ಕೋವಿಡ್ ದಿಂದ ಮೃತಪಟ್ಟರೆ ಜೆಸಿಬಿಯಿಂದ ಶವವನ್ನು ತಂದು ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ಅತ್ಯಂತ ನಿರ್ಲಕ್ಷ್ಯವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಇದರಿಂದಾಗಿ ಮೃತರ ಕುಟುಂಬದವರು ತಮ್ಮವರ ಅಂತ್ಯ ಸಂಸ್ಕಾರ ಗೌರವಯುತವಾಗಿ ನಡೆಯುತ್ತಿಲ್ಲ ಎನ್ನುವ ಸಂಕಟ ಅನುಭವಿಸುತ್ತಿದ್ದರು. ಆದರೆ ತಾಲೂಕಿನಲ್ಲಿ ಕೋವಿಡ್ ರೋಗಿಗಳಿಗೆ ಮರ್ಯಾದೆಯ ಅಂತ್ಯಸಂಸ್ಕಾರವನ್ನು ಪಿಎಫ್‌ಐ ತಂಡದ ಯುವಕರು ಮಾಡಲು ಮುಂದಾಗಿದ್ದು ಇಲ್ಲಿಯವರೆಗೆ 19ಕ್ಕೂ ಹೆಚ್ಚು ಕೋವಿಡ್ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರವನ್ನು ಅವರವರ ಧರ್ಮದ ವಿಧಿಧಾನಗಳೊಂದಿಗೆ ಗೌರವಯುತವಾಗಿ ಮಾಡಿದ್ದಾರೆ.
Related Articles
Advertisement
ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಮಾಡುತ್ತಿರುವ ಕಾರ್ಯ ಮಾನವೀಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಕೋವಿಡ್ ಸೋಂಕಿತರನ್ನು ಮುಟ್ಟಿ ಅಂತ್ಯ ಸಂಸ್ಕಾರ ಮಾಡುವ ಕಾರ್ಯವನ್ನು ಈ ಸಂಘಟನೆಯ ಕಾರ್ಯಕರ್ತರು ಆಯಾ ಧರ್ಮಕ್ಕೆ ಅನುಗುಣವಾಗಿ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. –ಡಾ| ದೇವರಾಜ್,100 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ
-ಆರ್.ಬಸವರೆಡ್ಡಿ ಕರೂರು