Advertisement

ಏಪ್ರಿಲ್‌ ಅಂತ್ಯಕ್ಕೆ ಕಾಂಕ್ರೀಟ್‌ ರಸ್ತೆ ಪೂರ್ಣ: ಸಚಿವ ಮಹದೇವಪ್ಪ

01:03 PM Mar 01, 2017 | Team Udayavani |

ಮೈಸೂರು: ನಗರದಲ್ಲಿ ನಡೆಯುತ್ತಿರುವ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಮುಂದಿನ ಏಪ್ರಿಲ್‌ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ನಗರದಲ್ಲಿ ಕೈಗೊಂಡಿದ್ದ ಕಾಂಕ್ರೀಟ್‌ ರಸ್ತೆ ಕಾಮಗಾರಿ ಬಹುತೇಕ ಪೂರ್ಣ ಗೊಂಡಿದ್ದು, ಗನ್‌ಹೌಸ್‌ನಿಂದ ಜಯಚಾಮ ರಾಜೇಂದ್ರ ವೃತ್ತದವರೆಗಿನ ಕಾಮಗಾರಿ ಏಪ್ರಿಲ್‌ ವೇಳೆಗೆ ಅಂತ್ಯವಾಗಲಿದೆ. ನಾಡಹಬ್ಬ ದಸರಾ ವೇಳೆ ಜಂಬೂ ಸವಾರಿ ಸಾಗುವ ಮಾರ್ಗವನ್ನು ಮಾತ್ರ ಕಾಂಕ್ರೀಟ್‌ ರಸ್ತೆಯನ್ನಾಗಿ ಮಾರ್ಪಾಡು ಮಾಡಬೇಕೆಂಬ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು.

ಬಳಿಕ ರಾಮಸ್ವಾಮಿ ವೃತ್ತದಿಂದ ಚಾಮ ರಾಜಜೋಡಿರಸ್ತೆ ಸೇರಿದಂತೆ ಜಯ ಚಾಮರಾಜೇಂದ್ರ ವೃತ್ತದವರೆಗಿನ ರಸ್ತೆ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತ ಸೇರಿದಂತೆ ಸಯ್ನಾಜಿರಾವ್‌ ರಸ್ತೆಯಿಂದ ಬನ್ನಿಮಂಟ ವೃತ್ತದವರೆಗಿನ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸುವುದಕ್ಕೆ ಸರ್ಕಾರ 50 ಕೋಟಿ ರೂ. ಬಿಡುಗಡೆ ಮಾಡಿದೆ.

ಅದರಂತೆ ಉದ್ದೇಶಿದ 6.7 ಕಿಲೋ ಮೀಟರ್‌ ಉದ್ದದ ಕಾಂಕ್ರಿಟ್‌ ರಸ್ತೆ ಅಭಿವೃದ್ಧಿಯ ಯೋಜನೆಯಲ್ಲಿ ಈಗಾಗಲೇ 6 ಕಿಲೋ ಮೀಟರ್‌ ರಸ್ತೆಯನ್ನು ಕಾಂಕ್ರಿಟ್‌ ರಸ್ತೆಯನ್ನಾಗಿ ಮಾಡಿದ್ದು, ಸದ್ಯ ಪ್ರಗತಿಯಲ್ಲಿರುವ ಕಾಮಗಾರಿ ಏಪ್ರಿಲ್‌ ವೇಳೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಂ.ಕೆ.ಸೋಮಶೇಖರ್‌, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪರಿಶೀಲಿಸಬೇಕಿದೆ…
ಮರಳು ಗಣಿಗಾರಿಕೆಗೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಅಧಿಕಾರಿಗೆ ಪ್ರೇರೇಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮಗನ ವಿರುದ್ಧ ದೂರು ನೀಡಿರುವುದಕ್ಕೆ ಬೆದರಿಕೆ ಹಾಕಲಾಗಿದೆ ಎಂಬ ದೂರುದಾರನ ಹೇಳಿಕೆ ಬಗ್ಗೆ ಗಮನ ಸೆಳೆದಾಗ, ನನ್ನ ಮೇಲೆ ಜೀವಬೆದರಿಕೆ ಆರೋಪ ಮಾಡುತ್ತಿರುವ ವ್ಯಕ್ತಿ ಯಾರು ಎಂಬುದು ನನಗೆ ತಿಳಿದಿಲ್ಲ. ನಾನು ಇಲ್ಲಿಯವರೆಗೆ ಅಂತಹ ಕೆಲಸವನ್ನು ಮಾಡದಿದ್ದರೂ ಜೀವ ಬೆದರಿಕೆ ಹಾಕುತ್ತಿದ್ದಾರೆಂದು ಅವರು ಹೇಳಿಕೊಂಡು ಓಡಾಡುತ್ತಿದ್ದಾರೆ. ಹಾಗಾಗಿ ಅವರ ಇತಿಹಾಸವನ್ನು ಪರಿಶೀಲಿಸ ಬೇಕಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next