Advertisement

ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮುಖ್ಯ: ಶರ್ಮಿಳಾ

02:20 AM Mar 09, 2022 | Team Udayavani |

ಉಡುಪಿ: ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸುತ್ತಿದ್ದು ಎಲ್ಲ ಕ್ಷೇತ್ರಗಳಲ್ಲೂ ಸಾಧನೆಯ ಛಾಪು ಮೂಡಿಸಿದ್ದಾಳೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು.

Advertisement

ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿ ದಂತೆ ವಿವಿಧ ಇಲಾಖೆ, ಒಕ್ಕೂಟ ಆಶ್ರಯದಲ್ಲಿ ಪರ್ಯಾಯ ಕೃಷ್ಣಾಪುರಮಠ ಸಹಯೋಗದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ಜರಗಿದ ಅಂತಾ
ರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆ ಗಡಿ ಕಾಯುವುದರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನೂ ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತಿದ್ದಾಳೆ. ಅದರ ನಡು ವೆಯೂ ಕೌಟುಂಬಿಕ ದೌರ್ಜನ್ಯಕ್ಕೆ ಹಲವರು ಬಲಿಯಾಗುತ್ತಿದ್ದು ಧೈರ್ಯ ನೀಡಿ, ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.

ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಮಾತನಾಡಿ, ಮಹಿಳೆಯರು ಸಶಕ್ತರಾಗಿ ಸಂಘಟಿತರಾಗಿ ಜಾಗೃತರಾಗಬೇಕು ಎಂದರು.

ಲಾಂಛನ ಬಿಡುಗಡೆ
ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌ ಆಧ್ಯಕ್ಷತೆ ವಹಿಸಿದ್ದರು. ಸಂಜೀವಿನಿ ಯೋಜನೆ ಕುರಿತು ಉಡುಪಿ ಜಿಲ್ಲಾ ಲಾಂಛನ ಬಿಡುಗಡೆ ಮಾಡಲಾಯಿತು. ಎಸ್‌ಡಿಎಂ ಆಯುರ್ವೇದ ಕಾಲೇಜಿನ ಪ್ರಾಂಶು ಪಾಲೆ ಡಾ| ಮಮತಾ ನವೀನ್‌ ಉಪನ್ಯಾಸ ನೀಡಿದರು. ಸಂಜೀವಿನಿ ಗುಂಪಿನ ಮಹಿಳೆಯರಿಗೆ ಚಾಲನಾ ಪರವಾನಗಿ, ಮಹಿಳಾ ಸ್ವ-ಸಹಾಯ ಸಂಘಕ್ಕೆ ಟ್ರ್ಯಾಕ್ಟರ್‌ ವಿತರಿಸಲಾಯಿತು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಜಿ.ಪಂ. ಯೋಜನಾ ನಿರ್ದೇಶಕ ಬಾಬು, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಜಗದೀಶ್‌, ರುಡ್‌ಸೆಟ್‌ ನಿರ್ದೇಶಕ ಪಾಪಾ ನಾಯ್ಕ, ವಿವಿಧ ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳಾದ ಶೀಲಾ ಕೆ. ಶೆಟ್ಟಿ, ಯಶೋದಾ ಶೆಟ್ಟಿ, ರಾಧಾದಾಸ್‌, ಶೋಭಾ ಕಲ್ಕೂರ, ಲೇಖಕಿ ವಾಸಂತಿ ಅಂಬಲಪಾಡಿ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಅವರು ಪ್ರಸ್ತಾವನೆಗೈದರು. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್‌ ಅವರು ಸ್ವಾಗತಿಸಿ, ಗೀತಾ ಅವರು ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next