Advertisement

ಆರ್ಥಿಕತೆಯಲ್ಲಿ ಸಹಕಾರಿಗಳ ಪಾತ್ರ ಮಹತ್ವದ್ದು

10:17 AM Aug 28, 2019 | Suhan S |

ಹುಬ್ಬಳ್ಳಿ: ದೇಶದಲ್ಲಿ ಸಹಕಾರ ಸಂಸ್ಥೆಗಳು ಹಾಗೂ ಸಹಕಾರಿ ಬ್ಯಾಂಕ್‌ಗಳು ಕಳೆದ ನೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿವೆ ಎಂದು ರಾಜ್ಯ ಸಹಕಾರಿ ಇಲಾಖೆ ಬೆಂಗಳೂರು ವಲಯದ ಸಹಕಾರಿ ಸಂಸ್ಥೆಗಳ ಆಡಿಟ್ ವಿಭಾಗದ ಜಂಟಿ ನಿರ್ದೇಶಕ ಮಂಜುನಾಥ ಹೆಗಡೆ ಹೇಳಿದರು.

Advertisement

ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ ಹುಬ್ಬಳ್ಳಿ ಶಾಖೆಯಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮೂಲ ಧ್ಯೇಯ ಜನರ ಕಲ್ಯಾಣವಾಗಿದ್ದು, ಅದನ್ನು ಸಹಕಾರ ಸಂಸ್ಥೆಗಳು ಯಶಸ್ವಿಯಾಗಿ ಸಾಧಿಸಿವೆ. ಸಮಾನಾಂತರ ಆರ್ಥಿಕ ವ್ಯವಸ್ಥೆಯನ್ನು ಮುಂದುವರಿಸಿ ಸಮಾಜದ ಎಲ್ಲ ವರ್ಗದ ಜನರಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಸ್ಥಿತಿ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದರು.

ಕರ್ನಾಟಕ ರಾಜ್ಯದ ಸಹಕಾರ ಕಾಯ್ದೆಯಲ್ಲಿ 2012ರಲ್ಲಿ ಆಮೂಲಾಗ್ರ ತಿದ್ದುಪಡಿಗಳನ್ನು ಮಾಡಲಾಗಿದ್ದು, 97ನೇ ಸಂವಿಧಾನ ತಿದ್ದುಪಡಿಗೆ ಪೂರಕವಾಗುವಂತೆ ಸಹಕಾರ ಕ್ಷೇತ್ರದ ಸದಸ್ಯರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪವನ್ನು ಕಡಿಮೆ ಮಾಡಿ ಇದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳಿಗೆ ಹಾಗೂ ಫಲಾನುಭವಿಗಳಿಗೆ ಮತ್ತು ನೌಕರರ ಕಲ್ಯಾಣಕ್ಕಾಗಿ ಅನೇಕ ಕಲಂಗಳನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಲೆಕ್ಕಪರಿಶೋಧಕ ಪ್ರಕಾಶ ಹೆಗಡೆ, ಸಹಕಾರ ಸಂಸ್ಥೆಗಳ ಆದಾಯ ತೆರಿಗೆ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ಶ್ರೀದೇವಿ ಭಟ್ ಅವರನ್ನು ಸನ್ಮಾನಿಸಲಾಯಿತು. ಲೆಕ್ಕಪರಿಶೋಧಕ ಸಂಸ್ಥೆಯ ಅಧ್ಯಕ್ಷ ಕೆ.ವಿ. ದೇಶಪಾಂಡೆ ಸ್ವಾಗತಿಸಿದರು. ಸಂಜೀವಕುಮಾರ ಹಾದಿಮನಿ ನಿರೂಪಿಸಿದರು. ಕಾರ್ಯದರ್ಶಿ ಎಚ್.ಎನ್‌. ಆಡಿನ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next