Advertisement

ಮಕ್ಕಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ

12:18 PM Apr 29, 2017 | |

ಮೈಸೂರು: ಮಕ್ಕಳ ಸಂರಕ್ಷಣೆಗಾಗಿ ಇರುವ ಕಾಯ್ದೆಗಳ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ಹೇಳಿದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾಡಳಿತ, ಜಿಪಂ, ವಾರ್ತಾ ಇಲಾಖೆ, ಪೊಲೀಸ್‌ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯೂನಿಸೆಪ್‌ ಮಕ್ಕಳ ಸಂರಕ್ಷಣಾ ಯೋಜನೆ ಹಾಗೂ ಬೆಂಗಳೂರು ಪರ್ಬಿಂಡನ್‌ ಸಂಸ್ಥೆ ವತಿಯಿಂದ ಶುಕ್ರವಾರ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಮಕ್ಕಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತ ಸಂವಾದ ಉದ್ಘಾಟಿಸಿ  ಮಾತನಾಡಿದರು.

ಮಕ್ಕಳ ಸಂರಕ್ಷಣೆಯಲ್ಲಿ ಪೊಲೀಸರು, ಸರ್ಕಾರಿ ಅಧಿಕಾರಿಗಳ ಜತೆಗೆ ಮಾಧ್ಯಮಗಳು ಹಾಗೂ ಎನ್‌ಜಿಒಗಳ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ. ಅದರಲ್ಲೂ ಮಕ್ಕಳ ಸಂರಕ್ಷಣೆ ವಿಚಾರದಲ್ಲಿ ಮಾಧ್ಯಮಗಳು ತಮ್ಮದೇ ಸಿದ್ಧಾಂತ ಅನುಸರಿಸಬೇಕಿದ್ದು, ಮಕ್ಕಳ ಸಂರಕ್ಷಣೆ ವಿಷಯದಲ್ಲಿ ಮಾಧ್ಯಮಗಳು ಸಂವೇದನಾಶೀಲತೆ ಬೆಳೆಸಿಕೊಳ್ಳಬೇಕು.

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದಾಗ ಸಂಪರ್ಕಿಸಬೇಕಾದ ಮಕ್ಕಳ ಸಹಾಯವಾಣಿ ಸೇರಿದಂತೆ ಇನ್ನಿತರ ಅಗತ್ಯ ಮಾಹಿತಿಗಳು ಹಾಗೂ ಪೋಕೊÕà ಮತ್ತು ಜೆಜೆ ಕಾಯ್ದೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ರಾಧಾ ಮಾತನಾಡಿ, ಹೆಣ್ಣು ಮಗು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂದರ್ಭದಲ್ಲಿ ಸಹಜವಾಗಿ ಆಕೆ ಮಾನಸಿಕವಾಗಿ ಕುಗ್ಗಿರುತ್ತಾಳೆ. ಇಂತಹ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿಗಳು, ಮಾಧ್ಯಮಗಳು, ಅಧಿಕಾರಿಗಳು ಒಮ್ಮೆಲೆ ಆಕೆಯ ಮೇಲೆ ಒತ್ತಡ ಹೇರಿ ಪ್ರಶ್ನಿಸುವುದರಿಂದ ಆಕೆಯ ಮನಸ್ಸಿನ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆ ಆ ರೀತಿ ಮಾಡಬಾರದು ಎಂದರು.

Advertisement

ಕೊಪ್ಪಳದ ಯುನಿಸೆಪ್‌ ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಕೆ. ರಾಘವೇಂದ್ರ ಭಟ್‌, ಮಕ್ಕಳ ಹಕ್ಕುಗಳು, ಹಿನ್ನೆಲೆ, ಪರಿಚಯ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012(ಪೋಕೊ) ಹಾಗೂ ಬಾಲ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರಲ್ಲಿ (ಜೆಜೆ ಕಾಯಿದೆ) ಮಾಧ್ಯಮದ ಉಲ್ಲೇಖ ಪರಿಚಯದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಬಳಿಕ ಬೆಂಗಳೂರು ಚೈಲ್ಡ್‌ ರೈಟ್ಸ್‌ ಟ್ರಸ್ಟ್‌ ನಿರ್ದೇಶಕ ವಾಸುದೇವ ಶರ್ಮ ಅವರು, ಮಕ್ಕಳ ಹಕ್ಕುಗಳ ಉಲ್ಲಂಘನೆ ವರದಿ ಪ್ರಕಟಣೆಯಲ್ಲಿ ಪತ್ರಿಕಾ ನೀತಿಸಂಹಿತೆ ಪರಿಚಯ ಮತ್ತು ಅದರಲ್ಲಿ ಮಾಧ್ಯಮದ ಪಾತ್ರ ಹಾಗೂ ಅದರತ್ತ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣ ವಿಚಾರವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಶೈಲಜಾ, ಮಹಿಳಾ ಅಭಿವೃದ್ಧಿ ಅಧಿಕಾರಿ ಪದ್ಮಾ, ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿ ನಾಗರಾಜು, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್‌ ಬಾಬು ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next