ಗದಗ: ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಜಿಲ್ಲೆಯ ವಿವಿಧ ಇಲಾಖೆ ಅ ಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಜನ-ಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಿದರು.
Advertisement
ನಗರದ ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಉಂಟಾಗುವ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದರೆ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು ಎಂದರು. ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದೆ. ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾ ಧಿತವಾಗುವ
ಹಳ್ಳಿಗಳೆಂದು ಗುರುತಿಸಲಾಗಿದೆ. ಅಲ್ಲಿಯೂ ಸಹ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗುವಂತೆ ಸೂಚಿಸಿದರು.
Related Articles
ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳ ಗುರುತಿಸಲಾಗಿದೆ. ಅದೇ ತರಹ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳ ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ ಎಂದರು. ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.
Advertisement
ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಭರತ್ ಎಸ್., ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥಶಿರಾಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.