Advertisement

ಉತ್ತಮ ಸಮಾಜಕ್ಕೆ ಮತದಾನ ಪಾತ್ರ ಮಹತ್ವದ್ದು

12:14 PM Dec 07, 2021 | Team Udayavani |

ರಾಯಚೂರು: ಸದೃಢ ಸಮಾಜ ನಿರ್ಮಾಣಕ್ಕೆ ಉತ್ತಮ ಜನನಾಯಕರ ಅಗತ್ಯವಿದೆ. ಅಂಥ ಜನನಾಯಕರನ್ನು ಆಯ್ಕೆ ಮಾಡಲು ಮತದಾನ ಬಹಳ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಪಂ ಯೋಜನಾ ನಿರ್ದೇಶಕ ಮಡೋಳಪ್ಪ ಪಿ.ಎಸ್‌ ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ವಿವಿಧ ಚಟುವಟಿಕೆಗಳ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

18 ವರ್ಷ ಪೂರ್ಣಗೊಂಡ ಯುವಜನರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸುವ ಮೂಲಕ ಅರ್ಹ ನಾಯಕರನ್ನು ಆಯ್ಕೆ ಮಾಡಬೇಕು. ಇದು ಪ್ರತಿ ಪ್ರಜೆಯ ಮುಖ್ಯ ಕರ್ತವ್ಯ ಎಂದರು.

ನಮ್ಮ ದೇಶದ ಪ್ರಜ್ಞಾಪ್ರಭುತ್ವದ ಇಡೀ ವಿಶ್ವದಲ್ಲೇ ದೊಡ್ಡದಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯೇ ಮತದಾನ. ತಮ್ಮ ಮನೆಯ ನೆರೆ-ಹೊರೆಯವರಿಗೆ ಮತದಾನ ನೋಂದಣಿ ಮಾಡಿಕೊಳ್ಳುವಂತೆ ಸಲಹೆ ನೀಡಬೇಕು ಎಂದು ಹೇಳಿದರು.

ಗ್ರಾಮ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತರನ್ನು ಸಂಪರ್ಕಿಸಿ ಅಥವಾ ನೇರವಾಗಿ ಆನ್‌ ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಯಾವುದೇ ಜಾತಿ, ಮತ, ಆಮಿಷಕ್ಕೊಳಗಾಗದೇ ಮತ ಚಲಾಯಿಸಬೇಕು. ಚುನಾವಣೆ ಪ್ರಕ್ರಿಯೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ತಿಳಿಸುವ ಉದ್ದೇಶದಿಂದ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.

Advertisement

ಡಿಡಿಪಿಐ ವೃಷಬೇಂದ್ರಯ್ಯ ಸ್ವಾಮಿ ಮಾತನಾಡಿ, ಜಿಲ್ಲೆಯ ಮತದಾನ ಜಾಗೃತಿ ಹಾಗೂ ಮತದಾನ ಶೇಕಡ ಹೆಚ್ಚಳಕ್ಕೆ ಈಗಾಗಲೇ ಅಗತ್ಯ ಸಿದ್ಧತೆಯೊಂದಿಗೆ ಜಾಗೃತಿ ಮೂಡಿಸಲಾಗುತ್ತದೆ. ಕೋವಿಡ್‌ -19ರ ನಿಯಂತ್ರಣಕ್ಕಾಗಿ ಪ್ರತಿ ಶಾಲಾ ವಿದ್ಯಾರ್ಥಿಯ ಪೋಷಕರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ. ಅಲ್ಲದೇ, ಕೋವಿಡ್‌ ಮುಕ್ತ ಜಿಲ್ಲೆಗಾಗಿ ಶಿಕ್ಷಣ ಇಲಾಖೆ ಪ್ರತಿ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದರು. ಡಿಡಿಪಿಯು ಸೋಮಶೇಖರ ಹೊಕ್ರಾಣಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಎಂ.ಎಚ್‌ ನಾಯಕ ಸೇರಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next