Advertisement

ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯ 

12:40 PM Jul 04, 2018 | |

ಮೈಸೂರು: ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸಾಮಾಜಿಕ ನ್ಯಾಯಪರ ವೇದಿಕೆ ಸದಸ್ಯರು ನಗರದಲ್ಲಿ  ಪ್ರತಿಭಟನೆ ನಡೆಸಿದರು.
 
ವರದಿ ಜಾರಿಗೆ ಆಗ್ರಹ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವೇದಿಕೆ ಸದಸ್ಯರು, ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಜನರು ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ವರ್ಗದವರಿಗೂ ಹೆಚ್ಚು ರಕ್ಷಣೆ ನೀಡುವ ನಿಟ್ಟಿನಲ್ಲಿ ಆದಿಜಾಂಬವ ಅಧಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು, ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸಿದರು. 

Advertisement

ಆದಿಜಾಂಬವ ಸಮುದಾಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಗುರುತಿಸಲ್ಪಟ್ಟಿದ್ದರೂ ಸಂವಿಧಾನಿಕವಾಗಿ ಯಾವುದೇ ಸೌಲಭ್ಯವೂ ಸಿಗುತ್ತಿಲ್ಲ. ಹೀಗೆ ಅವಕಾಶ ವಂಚಿತರಾಗಿ ಬದುಕುತ್ತಿರುವವರಿಗೆ ತಾರತಮ್ಯವಿಲ್ಲದೆ ಮೀಸಲಾತಿ ಸೌಲಭ್ಯ ಸಿಗಬೇಕಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ, ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವ ಜತೆಗೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಮನವಿ ಮಾಡಿದರು. 

ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ರಾಜಣ್ಣ, ಡಾ.ಆನಂದ ಕುಮಾರ್‌, ಪ್ರಕಾಶ್‌, ಶೋಭಾ, ಡಾ.ಶ್ರೀನಿವಾಸ ಮೂರ್ತಿ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next