Advertisement

ಸಾಕ್ಷ್ಯ ಇದ್ದರಷ್ಟೇ ಸನಾತನ ಸಂಸ್ಥೆ ನಿಷೇಧಕ್ಕೆ ಚಿಂತನೆ​​​​​​​

06:00 AM Sep 01, 2018 | Team Udayavani |

ಬೆಂಗಳೂರು: “ಸನಾತನ ಸಂಸ್ಥೆ ನಿಷೇಧಿಸುವಂತೆ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದ ಮಾತ್ರಕ್ಕೆ ರಾಜ್ಯದಲ್ಲೂ ಆ ಸಂಸ್ಥೆಯನ್ನು ನಿಷೇಧಿಸಲು ಸಾಧ್ಯವಿಲ್ಲ. ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಲ್ಲಿ ಅದು ಭಾಗಿಯಾದ ಬಗ್ಗೆ ಸಾಕ್ಷಿ ಸಮೇತ ದೃಢಪಟ್ಟರೆ ಮಾತ್ರ ಸನಾತನ ಸಂಸ್ಥೆ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ಸನಾತನ ಸಂಸ್ಥೆ ಗೌರಿ ಹತ್ಯೆ ಪ್ರಕರಣದಲ್ಲಿಭಾಗಿಯಾಗಿರುವುದು ದೃಢಪಟ್ಟಿರುವುದರಿಂದ ಆ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ನಿಷೇಧಿಸುವಂತೆ ಆಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ನೇತೃತ್ವದಲ್ಲಿ ಗೌರಿ ಲಂಕೇಶ್‌ ಟ್ರಸ್ಟ್‌ ಸದಸ್ಯರು ತಮ್ಮನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಉಪಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಗೌರಿ ಹತ್ಯೆ ಕುರಿತಂತೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಸನಾತನ ಸಂಸ್ಥೆ ಈ ಹತ್ಯೆಯಲ್ಲಿ ಭಾಗಿಯಾಗಿದೆ ಎಂಬ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಪೊಲೀಸರ ತನಿಖೆಯಲ್ಲಿ ಸೂಕ್ತ ಮಾಹಿತಿ ಲಭ್ಯವಾಗಿ ಅದು ಸಾಕ್ಷ್ಯ ಸಮೇತ ದೃಢಪಟ್ಟರೆ ಬಳಿಕ ಆ ಸಂಸ್ಥೆಯನ್ನು ನಿಷೇಧಿಸುವ ಬಗ್ಗೆ ಯೋಚನೆ ಮಾಡಬಹುದು ಎಂದು ತಿಳಿಸಿದರು.

ಮಹಾರಾಷ್ಟ್ರದ ಕ್ರಮದ ಬಗ್ಗೆ ಮಾಹಿತಿ ಇಲ್ಲ: ನರೇಂದ್ರ ದಾಬೋಲ್ಕರ್‌ ಮತ್ತು ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆ ಭಾಗಿಯಾಗಿದೆ ಎಂಬ ಮಾಹಿತಿ ಮೇಲೆ ಮಹಾರಾಷ್ಟ್ರ ಸರ್ಕಾರ ಈ ಸಂಸ್ಥೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮಹಾರಾಷ್ಟ್ರ ಸರ್ಕಾರ ನಿಷೇಧಕ್ಕೆ ಪತ್ರ ಬರೆದರೆ ರಾಜ್ಯ ಸರ್ಕಾರ ಏಕೆ ಪತ್ರ
ಬರೆಯಬಾರದು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರ ಈ ರೀತಿ ಪತ್ರ ಬರೆದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಖಚಿತ ಮಾಹಿತಿ ಬಂದರಷ್ಟೇ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

Advertisement

ಮೆವಾನಿ, ರೈ ವಿರುದ್ಧದ ಪ್ರಕರಣ ವಾಪಸ್‌ಗೆ ಮನವಿ
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗುಜರಾತ್‌ ಶಾಸಕ ಜಿಗ್ನೇಶ್‌ ಮೆವಾನಿ ಮತ್ತು ನಟ ಪ್ರಕಾಶ್‌ ರೈ ವಿರುದ್ಧ
ದಾಖಲಿಸಿರುವ ಪ್ರಕರಣಗಳನ್ನು ವಾಪಸ್‌ ಪಡೆಯುವಂತೆ ಗೌರಿ ಲಂಕೇಶ್‌ ಟ್ರಸ್ಟ್‌ ಶುಕ್ರವಾರ ಗೃಹ ಸಚಿವರೂ ಆಗಿರುವ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿತು.

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ನೇತೃತ್ವದಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ಟ್ರಸ್ಟ್‌ನ ಸದಸ್ಯರು, ವಿಧಾನಸಭಾ ಚುನಾವಣೆ ವೇಳೆ ಮತೀಯ ಸಂಘಗಳು ಜಯಗಳಿಸಬಾರದೆಂಬ ಶೀರ್ಷಿಕೆಯಡಿ ರಾಜ್ಯದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಕಾರ್ಯಕ್ರಮದಲ್ಲಿ ಜಿಗ್ನೇಶ್‌ ಮೆವಾನಿ, ಪ್ರಕಾಶ್‌ ರೈ ಸೇರಿ ಅನೇಕರು ಪಾಲ್ಗೊಂಡಿದ್ದರು. ಆದರೆ, ಕೆಲವರು ಈ ಇಬ್ಬರ ವಿರುದಟಛಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನೀಡಿದ್ದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣ ಅನಗತ್ಯವಾಗಿರುವುದರಿಂದ ಅವುಗಳನ್ನು ಹಿಂಪಡೆಯುವಂತೆ ಮನವಿ ಮಾಡಿದರು. ಈ ವೇಳೆ ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್‌, ಪತ್ರಕರ್ತ ದಿನೇಶ್‌ ಅಮೀನ್‌ಮಟ್ಟು ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next