Advertisement

ಪಾಲಿಕೆ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್‌

12:56 PM Oct 22, 2018 | |

ಬೆಂಗಳೂರು: ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುವಂತಾಗಲು ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅವಂತ್‌ ಗಾರ್ಡ್‌ ಸಂಸ್ಥೆಗಳು ಪಾಲಿಕೆಯೊಂದಿಗೆ ಒಪ್ಪಂದ ಮಾಡಿಕೊಂಡು ಜಾರಿಗೊಳಿಸುತ್ತಿರುವ “ರೋಷಿನಿ‌’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಟ್ಯಾಬ್‌ ದೊರೆಯಲಿದೆ.

Advertisement

“ಎಲ್ಲಾದರೂ ಎಲ್ಲಿಂದಾದರೂ ಕಲಿ’ ಎಂಬ ಘೋಷವಾಕ್ಯದಡಿ ಕಲಿಕಾ ವಿಧಾನವನ್ನು ಹೈಟೆಕ್‌ಗೊಳಿಸಲು ಯೋಜನೆ ರೂಪಿಸಲಾಗಿದ್ದು ಅದರಂತೆ ಪಾಲಿಕೆಯ ಶಾಲಾ-ಕಾಲೇಜುಗಳಲ್ಲಿರುವ 1ರಿಂದ 12ನೇ ತರಗತಿವರೆಗಿನ 12 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‌ ಸಿಗಲಿದೆ.

ೆಪಾಲಿಕೆಯ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕರು-ಉಪನ್ಯಾಸಕರಲ್ಲಿ ಬೋಧನಾ ಕೌಶಲ್ಯ ಸ್ಪರ್ಧಾತ್ಮಕವಾಗಿ ಇಲ್ಲದಿರುವುದು. ಆ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಸ್ಯಾಟಲೈಟ್‌ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಟ್ಯಾಬ್‌ ನೀಡಲು ತೀರ್ಮಾನಿಸಲಾಗಿದೆ. ಈ ಮೂಲಕ   ವಿದ್ಯಾರ್ಥಿಗಳಲ್ಲಿ  ತಂತ್ರಜ್ಞಾನ ಆಧಾರಿತ ಶಿಕ್ಷಣದದ ಬಗ್ಗೆ ಆಸಕ್ತಿ ಮೂಡಿಸುವುದು  ಉದ್ದೇಶವಾಗಿದೆ. 

ವಿದ್ಯಾರ್ಥಿಗಳಿಗೆ ಟ್ಯಾಬ್‌ ನೀಡುವ ಜತೆಗೆ ಪೋಷಕರಿಗಾಗಿ ವಿಶೇಷ ಆ್ಯಪ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಆ್ಯಪ್‌ ಮೂಲಕ ಪೋಷಕರು ನಿತ್ಯ ಪಾಲಿಕೆಯ ಶಾಲೆಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ತಮ್ಮ ಮಕ್ಕಳ ಕಲಿಕಾ ಸಾಮರ್ಥಯ, ಪರೀಕ್ಷೆಗಳಲ್ಲಿ ಮಕ್ಕಳು ಪಡೆದುಕೊಂಡಿರುವ ಅಂಕಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next