Advertisement

ಶಾಲೆ ತೆರೆದರೂ ತರಗತಿ ನಡೆಯದು: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

12:30 AM Sep 19, 2020 | mahesh |

ಮೈಸೂರು/ಬೆಂಗಳೂರು: ಸೋಮವಾರದಿಂದ ಶಾಲೆಗಳ ಬಾಗಿಲು ತೆರೆದರೂ ತರಗತಿಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ
ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

Advertisement

ಕೇಂದ್ರ ಸರಕಾರದ ಆದೇಶದ ಪ್ರಕಾರ 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗೆ ಹೋಗಿ ಶಿಕ್ಷಕರ ಬಳಿ ಅನುಮಾನಗಳನ್ನು ಬಗೆಹರಿಸಿಕೊಳ್ಳುವ ಅವಕಾಶ ಇದೆಯೇ ವಿನಾ ತರಗತಿಗಳು ಆರಂಭವಾಗುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ತರಗತಿ ಆರಂಭಿಸಲು ಕೇಂದ್ರ ಸರಕಾರ ಅನುಮತಿ ನೀಡಿಯೂ ಇಲ್ಲ ಎಂದಿದ್ದಾರೆ.

ಸೆ. 21ರಿಂದ ತರಗತಿಗಳು ಆರಂಭವಾಗುವುದಿಲ್ಲ. ಶಿಕ್ಷಕರೆಲ್ಲರೂ ಶಾಲೆಗೆ ಬರುತ್ತಾರೆ. ವಿದ್ಯಾರ್ಥಿಗಳು ಆವಶ್ಯಕತೆ, ಅನುಮಾನಗಳಿದ್ದರೆ ಶಾಲೆಗೆ ಬಂದು ಶಿಕ್ಷಕರ ಬಳಿ ಮಾತನಾಡಬಹುದು. ಇದು ಮಾಮೂಲಿ ತರಗತಿಯಲ್ಲ. ವಿದ್ಯಾರ್ಥಿಗಳು ತಮ್ಮ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅಲ್ಲದೆ ಶಾಲೆಯಲ್ಲಿ ಎಲ್ಲ ಮುಂಜಾಗ್ರತೆ ಕ್ರಮಗಳನ್ನೂ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ, ರಾಜ್ಯ ಸರಕಾರದಿಂದ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ತಯಾರಾಗಿದೆ ಎಂದು ಹೇಳಿದರು.

ಮಾರ್ಗಸೂಚಿ ಬಿಡುಗಡೆಯಾಗಿಲ್ಲ
ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯೂ ಈವರೆಗೆ ಯಾವುದೇ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ. ಕೇಂದ್ರ ಶಿಕ್ಷಣ ಇಲಾಖೆಯಿಂದ ಸ್ಪಷ್ಟ ಸೂಚನೆ ಬರುವ ವರೆಗೂ ತರಗತಿ ನಡೆಸಲು ಅನುಮತಿ ನೀಡು ವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಯೊಬ್ಬರು ಮಾಹಿತಿ ನೀಡಿದ್ದಾರೆ.

ಶಿಕ್ಷಣ ಇಲಾಖೆಯಿಂದ ಮಕ್ಕಳ ಸುರಕ್ಷೆಗೆ ಸಂಬಂಧಿಸಿ ಎಸ್‌ಒಪಿ ಸಿದ್ಧ ಪಡಿಸಲಾಗುತ್ತಿದೆ. ಇದರ ಆಧಾರದಲ್ಲಿ ಶಾಲೆ ನಡೆಯಬೇಕಿರುವುದರಿಂದ ಸರಕಾರ ಈವರೆಗೆ ಶಾಲಾರಂಭದ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ ಸೆ. 21ರಿಂದ ಶಾಲೆಗಳನ್ನು ಆರಂಭಿಸಲು ಸಾಧ್ಯವಿಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಗಳು ತಿಳಿಸಿವೆ.

Advertisement

ಪದವಿ ತರಗತಿಗೆ ಸಿದ್ಧತೆ
ರಾಜ್ಯಾದ್ಯಂತ ಆಯಾ ವಿ.ವಿ.ಗಳ ಹಂತದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆಗಳು ನಡೆಯುತ್ತಿವೆ. ಪ್ರಥಮ ಸೆಮಿಸ್ಟರ್‌ಪ್ರವೇಶ ಪ್ರಕ್ರಿಯೆಯು ಬಹುತೇಕ ಅಂತಿಮ ಹಂತದಲ್ಲಿದೆ. ವಿವಿಧ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳು ನಡೆಯುತ್ತಿವೆ. ಅ. 1 ರಿಂದ ಕಾಲೇಜು ಆರಂಭಿ ಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸುರಕ್ಷಾ ಕ್ರಮವನ್ನು ಅಳವಡಿಸಿಕೊಂಡು ಅಕ್ಟೋಬರ್‌ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗುವ ಸಾಧ್ಯತೆಯಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next