Advertisement
76 ಮಕ್ಕಳ ದಾಖಲಾತಿ: 1ನೇ ತರಗತಿಯಿಂದ 7ನೇ ತರಗತಿವರೆಗೆ ಸುಮಾರು 76 ಮಕ್ಕಳು ದಾಖಲಾಗಿದ್ದಾರೆ. ಬಡ, ಕಾರ್ಮಿಕ ಮಕ್ಕಳು ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಶಾಲೆಯ ಕೊಠಡಿಗಳು ಶಿಥಿಲಗೊಂಡಿರುವುದರಿಂದ ಮಕ್ಕಳು ಆತಂಕದಲ್ಲಿಯೇ ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಕಾಂಪೌಂಡ್ ಇಲ್ಲ: ಶಾಲೆಗೆ ಯಾವುದೇ ಕಾಂಪೌಂಡ್ ಇಲ್ಲದಿರುವುದರಿಂದ ಅಭದ್ರತೆ ಕಾಡುತ್ತಿದೆ. ರಾತ್ರಿ ವೇಳೆ ಕೆಲವು ಕಿಡಿಗೇಡಿಗಳು ಮದ್ಯ ಸೇವನೆಗೆ ಬಳಸಿಕೊಳ್ಳುತ್ತಿದ್ದಾರೆ. ಬೆಳಗ್ಗೆ ಬಂದಾಗ ಮದ್ಯದ ಬಾಟಲ್‌ಗಳು, ಬೀಡಿ, ಸಿಗರೇಟಿನ ವಸ್ತುಗಳು ಬಿದ್ದಿರುತ್ತವೆ ಎಂದು ತಿಳಿದು ಬಂದಿದೆ.
ಸಮನ್ವಯದ ಕೊರತೆ
ಶಾಲೆ, ಎಸ್‌ಡಿಎಂಸಿ ನಡುವೆ ಸಮನ್ವಯದ ಕೊರತೆ ಇದೆ. ಶಾಲೆ ಹಾಗೂ ಗ್ರಾಮಸ್ಥರು ಒಗ್ಗಟ್ಟಾಗಿ ಅಭಿವೃದ್ಧಿಗೆ ಶ್ರಮಿಸಿದರೆ ಶಾಲೆ ಪುನಶ್ಚೇತನಗೊಳಿಸಬಹುದಾಗಿದೆ. ಶಾಲೆಯ ಯಾವುದೇ ಕಾರ್ಯಕ್ರಮ, ಅಭಿವೃದ್ಧಿಗೆ ಗ್ರಾಮದಲ್ಲಿ ಸ್ಪಂದನೆ ಇಲ್ಲ ಎಂದು ಮುಖ್ಯ ಶಿಕ್ಷಕಿ ಹೇಳಿದರೆ, ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಆದರೆ, ಮುಖ್ಯ ಶಿಕ್ಷಕರು ನಿರ್ಲಕ್ಷ್ಯ ವಹಿಸುತ್ತಾರೆ ಎಂದು ಎಸ್ ಡಿಎಂಸಿ ಅಧ್ಯಕ್ಷರು ಹೇಳುತ್ತಾರೆ.
ಶಾಲೆ ದುರಸ್ತಿಗೆ ಹಲವು ಬಾರಿ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಕ್ರಮ ವಹಿಸುತ್ತಿಲ್ಲ. ಸುಮಾರು ವರ್ಷದಿಂದ ಶಾಲೆ ಇದೇ ಪರಿಸ್ಥಿತಿಯಲ್ಲಿದೆ. ಆದರೂ, ಇದಕ್ಕೆ ಹಣ ಬಿಡುಗಡೆ ಮಾಡಿ ದುರಸ್ತಿಗೆ ಮುಂದಾಗುತ್ತಿಲ್ಲ.
ರವಿ, ಎಸ್‌ಡಿಎಂಸಿ ಅಧ್ಯಕ್ಷ, ಬೇವಿನಹಳ್ಳಿ
ಎಚ್.ಶಿವರಾಜು