ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು ಎನ್ನುವ ತೀರ್ಮಾನವನ್ನು ಜು.5 ರ ನಂತರವೇ ನಿರ್ಧರಿಸಲಾಗುವುದು ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಜಿಲ್ಲಾ ಕೇಂದ್ರಕ್ಕೆ ಸೋಮವಾರ ಬೆಳಗ್ಗೆ ಆಗಮಿಸಿದ್ದ ಅವರು, ಇಲ್ಲಿನ ಬಿಜಿಎಸ್, ನ್ಯೂ ಹೊರೈಜಾನ್, ಸಂತ ಜೋಸೆಫ್, ಸರ್ಕಾರಿ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಪರಿಶೀಲಿಸಿದ ನಂತರ ಮಾತನಾಡಿ, ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಂತ ಮಕ್ಕಳ ಪೋಷಕರು ಕೋವಿಡ್ 19 ಭಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಜನರ ಅಭಿಪ್ರಾಯ ಪಡೆದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಕೇಂದ್ರಗಳ ಪರಿಶೀಲನೆ: ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ತಾವು ಭೇಟಿ ಮಾಡಿದ ನಗರದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ಹಿತದೃಷ್ಟಿಯಿಂದ ಕೈಗೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಖುದ್ದು ಪರಿಶೀಲಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ನಗರದ ನ್ಯೂ ಹೊರೈಜಾನ್ ಶಾಲೆಯಲ್ಲಿ ವಿದ್ಯಾರ್ಥಿ ರಾಜೇಶ್ ತನ್ನ ಹುಟ್ಟುಹಬ್ಬದ ಪ್ರಯುಕ್ತ ಸಚಿವರಿಗೆ ಬರ್ಫಿ ಕೊಟ್ಟರು.
ಆಗ ಸಚಿವರು ವಿದ್ಯಾರ್ಥಿಗೆ ಶುಭ ಕೋರಿದರು. ಪ್ರವಾಸ ವೇಳೆ ತಮಗೆ ಎದುರು ಬಂದ ವಿದ್ಯಾರ್ಥಿ, ಪೋಷಕರನ್ನು ಸಚಿವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡು ಸಲಹೆ, ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಜಿ.ನಾಗೇಶ್, ತಹಶೀ ಲ್ದಾರ್ ನಾಗಪ್ರಶಾಂತ್, ಡಿವೈಎಸ್‌ಪಿ ರವಿ ಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಹಾಯವಾಣಿಗೆ ತಿಳಿಸಿ: ಈ ವರ್ಷ ಕೋವಿಡ್ 19 ಸಂಕಷ್ಟ ಇರುವು ದರಿಂದ ಖಾಸಗಿ ಶಾಲೆಗಳು ಮಾನ ವೀಯತೆ ದೃಷ್ಟಿಯಿಂದ ಯಾವುದೇ ಕಾರ ಣಕ್ಕೂ ಶುಲ್ಕವನ್ನು ಹೆಚ್ಚಳ ಮಾಡಬಾರದು. ಈಗಾಗಲೇ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಸುತ್ತೋಲೆ ತಲುಪಿದೆ. ಸುತ್ತೋಲೆ ಉಲ್ಲಂಘಿಸಿ ಶುಲ್ಕ ವಸೂಲಿಗೆ ಇಳಿದರೆ ಅವರ ವಿರುದ್ಧ ಪೋಷಕರು ಸಹಾಯವಾಣಿಗೆ ತಿಳಿಸಬಹುದು. ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಸಿದರು.