Advertisement

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

01:07 PM May 03, 2024 | Team Udayavani |

ಬೆಂಗಳೂರು: ಮೋಜು-ಮಸ್ತಿಗಾಗಿ ದುಬಾರಿ ಮೌಲ್ಯದ ಬೈಸಿಕಲ್‌ಗ‌ಳ ಕಳವು ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ನನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಒಡಿಶಾ ಮೂಲದ ಸ್ವಾದೀನ್‌ ರೌತ್ರಾ(25) ಬಂಧಿತ. ಆರೋಪಿಯಿಂದ 4 ಲಕ್ಷ ರೂ. ಮೌಲ್ಯದ 17 ಬೈಸಿಕಲ್‌ಗ‌ಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಒಎಂಬಿಆರ್‌ ಲೇಔಟ್‌ ನಿವಾಸಿ ಶಶಿಕಲಾ ಅವರ ಮನೆ ಮುಂಭಾಗ ನಿಲ್ಲಿಸಿದ್ದ ಕ್ರಿಸ್ಟಲ್‌ ಇ-ನೋಟೋರ್ಯಾಡ್‌ ಎಲೆಕ್ಟ್ರಿಕ್‌ ಬೈಸಿಕಲ್‌ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತ ಮೋಜು-ಮಸ್ತಿಗಾಗಿ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಸಿಕಲ್‌ಗ‌ಳ ಕಳವು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next