Advertisement

ನೆಹರು ತಾರಾಲಯದಿಂದ 30ರಂದು ವಿಚಾರ ಸಂಕಿರಣ

11:14 AM Oct 27, 2018 | |

ಬೆಂಗಳೂರು: ಭೌತವಿಜ್ಞಾನಿ ಹೋಮಿ ಜಹಂಗೀರ್‌ ಬಾಬಾ ಜನ್ಮ ದಿನಾಚರಣೆ ಅಂಗವಾಗಿ ಜವಾಹರ್‌ಲಾಲ್‌ ನೆಹರು ತಾರಾಲಯದ ವತಿಯಿಂದ ಅ.30ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಶಿಕ್ಷಕರಿಗಾಗಿ ಆಯೋಜಿಸಿರುವ ವಿಚಾರ ಸಂಕಿರಣದಲ್ಲಿ ಹೋಮಿ ಜಹಂಗೀರ್‌ ಬಾಬಾ ಅವರ ಬದುಕು ಮತ್ತು ಸಾಧನೆಗಳ ಬಗ್ಗೆ ಚರ್ಚಿಸಲಾಗುವುದು.

Advertisement

ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಜವಾಹರ್‌ ಲಾಲ್‌ ನೆಹರು ತಾರಾಲಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ. 40 ಶಿಕ್ಷಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಆಸಕ್ತರು info@taralaya.org ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 080 22379725, 22266084 ಅಥವಾ //www.taralaya.org/announcements.php ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next