Advertisement

ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂ

11:19 PM Sep 23, 2022 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್‌. ಕಮಲ್‌, ರಾಜೇಂದ್ರ ಬಾದಾಮಿಕರ್‌ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್‌ ಅವರ ಸೇವೆಯನ್ನು ಖಾಯಂ ಗೊಳಿಸಲಾಗಿದೆ.

Advertisement

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್‌ ಅಧ್ಯಕ್ಷತೆಯಲ್ಲಿ ಸೆ.7ರಂದು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಸಭೆಯಲ್ಲಿ ಈ ಮೂವರ ಸೇವೆ ಖಾಯಂಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗಿತ್ತು.

ಅದರಂತೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next