ಮಂಗಳೂರು: ಪ್ರವಾಸೋದ್ಯಮಕ್ಕೆ ಪೂರಕವಾಗಿ ನಗರದ ಕದ್ರಿ ಪಾರ್ಕ್ ಮುಂಭಾಗದ ರಸ್ತೆಯು ಸ್ಮಾರ್ಟ್‌ಸಿಟಿ ಯೋಜನೆಯಡಿ ಸ್ಮಾರ್ಟ್ ರಸ್ತೆಯಾಗಿ ಅಭಿವೃದ್ಧಿಯಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ಕಾಮ ಗಾರಿ ಭರದಿಂದ ಸಾಗುತ್ತಿದೆ.
ಸದ್ಯ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಮತ್ತೂಂದು ಬದಿ ರಸ್ತೆ ಕಾಮಗಾರಿ ಆರಂಭಗೊಂಡಿದೆ. ಸರ್ಕ್ನೂಟ್ ಹೌಸ್ ಬಳಿಯಿಂದ ಕದ್ರಿ ಪಾರ್ಕ್‌ಗೆ ತೆರಳುವ ಒಂದು ಕಡೆಯ ರಸ್ತೆಯನ್ನು ಅಗೆಯಲಾಗಿದ್ದು, ಅಲ್ಲಿ ಜಲ್ಲಿ ಹಾಕಿ ರೋಲರ್ ಮುಖೇನ ಹದಗೊಳಿಸಲಾಗುತ್ತಿದೆ. ಮತ್ತೂಂದೆಡೆ ಜೇಸಿಬಿ ಮುಖೇನ ರಸ್ತೆ ಅಗೆಯುವ ಕಾಮಗಾರಿ ಪ್ರಗತಿಯಲ್ಲಿದೆ.
ರಸ್ತೆಯ ಒಂದು ಬದಿಯಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಬ್ಯಾರಿ ಕೇಡ್ ಅಳವಡಿಸಲಾಗಿದೆ. ಕದ್ರಿ ಪಾರ್ಕ್ ರಸ್ತೆಯಲ್ಲಿ ಬೃಹದಾಕರಾದ ಮರಗಳಿದ್ದು, ಅವುಗಳನ್ನು ಉಳಿಸಿ, ಪರಿಸರಕ್ಕೆ ತೊಂದರೆಯಾಗದಂತೆ ರಸ್ತೆ ಕಾಮಗಾರಿ ನಡೆಯುತ್ತಿರುವುದು ವಿಶೇಷ.
ಸ್ಮಾರ್ಟ್‌ಸಿಟಿ ಯೋಜನೆಯಡಿ ಒಟ್ಟು 12 ಕೋ.ರೂ. ವೆಚ್ಚದ ಯೋಜನೆ ಇದಾಗಿದೆ. ರಸ್ತೆಯ ಮಧ್ಯ ಭಾಗದಲ್ಲಿ ಆಕರ್ಷಕ ಹಾಗೂ ಮನ ಸೆಳೆಯುವ ಗಾರ್ಡನಿಂಗ್ ಮಾಡಲಾಗುತ್ತದೆ. ಈ ರಸ್ತೆಯ ಕೇಬಲ್‌ಗಳೆಲ್ಲ ಮಣ್ಣಿನ ಕೆಳಭಾಗದಲ್ಲಿ ಸಾಗಲಿದೆ. ಎಲ್ಲ ವಯರ್‌ಗಳು ಅಂಡರ್‌ಗ್ರೌಂಡ್‌ನಲ್ಲಿರಲಿದೆ. ಸುಸಜ್ಜಿತ ಸೆಂಟ್ರಲ್ ಕಮಾಂಡ್ ಸೆಂಟರ್ ಕಾರ್ಯಾಚರಿಸಲಿದೆ.
ಸ್ಮಾರ್ಟ್ ರೋಡ್‌ನಲ್ಲಿ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ ಅಳವಡಿಸಿ ಕಸದ ತೊಟ್ಟಿ, ಸ್ವಯಂಚಾಲಿತ ತ್ಯಾಜ್ಯ ನಿರ್ವಹಣಾ ವಾಹನ, ಇ-ಟಾಯ್ಲೆಟ್, ಸಿಸಿ ಕೆಮರಾ ಅಳವಡಿಸಿದ ಟ್ರಾಫಿಕ್ ವ್ಯವಸ್ಥೆ, ಬಸ್ ಟ್ರ್ಯಾಕಿಂಗ್ ವ್ಯವಸ್ಥೆ, ವೈಫೈ ಕೇಂದ್ರ, ಮಾಹಿತಿ ಬೋರ್ಡ್, ವಾಕ್ ವೇ ವ್ಯವಸ್ಥೆ ಇರಲಿದೆ. ರಸ್ತೆ ಅಕ್ಕಪಕ್ಕ ಹಸುರ ಹೊದಿಕೆ, ಎಲ್‌ಇಡಿ, ಸ್ಮಾರ್ಟ್ ಬಸ್ ನಿಲ್ದಾಣ, ಕಿಯೋಸ್ಕ್ ಸೆಂಟರ್‌ಗಳು, ಬಸ್ಸು, ವಿಮಾನ, ರೈಲಿನ ಸಮಯದ ವಿವರ ಸಹಿತ ಎಲ್ಲವೂ ಹೈಫೈ ರೀತಿಯಲ್ಲಿ ದೊರೆಯಲಿದೆ. ರಸ್ತೆಯ ಎರಡೂ ಬದಿಯಲ್ಲಿ ಸುಸಜ್ಜಿತ ಹಾಗೂ ಆಕರ್ಷಕ ಶೈಲಿಯಲ್ಲಿ ಅಂಗಡಿ, ಮಳಿಗೆಗಳನ್ನು ನಿರ್ಮಿಸಿ ಕೊಡಲಾಗುತ್ತದೆ.