ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಒಕ್ಕೂಟ ಹಾಗೂ ನಿಸರ್ಗ ಯುವತಿ ಮಂಡಳಿ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Advertisement
ಯುವ ಒಕ್ಕೂಟಗಳು ಸಾಮಾ ಜಿಕ ಕಳಕಳಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ವೆಂದರು. ಕಳೆದ ಅನೇಕ ವರ್ಷಗಳಿಂದ ಕೊಡಗು ಜಿಲ್ಲೆಯ ಯುವ ಸಮೂಹ ಯುವ ಒಕ್ಕೂಟಗಳ ಮೂಲಕ ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಸಂಕಷ್ಟದ ಪರಿಸ್ಥಿತಿಗಳಲ್ಲೂ ಸ್ಪಂದಿಸುತ್ತಿರುವುದಲ್ಲದೆ ಸಂಸ್ಕೃತಿಯ ಬೆಳವಣಿಗೆಗೂ ಸಹಕರಿಸುತ್ತಿರುವುದು ಹೆಮ್ಮೆಯ ವಿಚಾರವೆಂದು ಬೋಪಯ್ಯ ಹೇಳಿದರು. ಇಂದಿನ ಪರಿಸ್ಥಿತಿಯಲ್ಲಿ ಯುವ ಒಕ್ಕೂಟಗಳು ಮತ್ತಷ್ಟು ಸಬಲತೆಯನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.